ಹನುಮನಾಳ: ಆರೋಗ್ಯ ಉಚಿತ ತಪಾಸಣಾ ಶಿಬಿರ

ಹನುಮಸಾಗರ: ‘ಆರೋಗ್ಯ ಇದ್ದರೆ ನಾವು ಸುಖವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿಯುವ ಬದಲು ಕಾಯಿಲೆ ಬರದಂತೆ ತಡೆಯುವುದು ಜಾಣತನ’ ಎಂದು ಮುಖಂಡ ವೀರಣ್ಣ ಗಜೇಂದ್ರಗಡ ಹೇಳಿದರು.
ಸಮೀಪದ ಹನುಮನಾಳ ಗ್ರಾಮದಲ್ಲಿ ಮಾರುತಿ ದವಾಖಾನೆ ಉದ್ಘಾಟನೆ ಪ್ರಯುಕ್ತ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಡಾ. ಶರಣು ಮೇಟಿ ಮಾತನಾಡಿ,‘ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ’ ಎಂದು ಹೇಳಿದರು.
ಡಾ, ಸಂಗೀತಾ ಮೇಟಿ ಮಾತನಾಡಿದರು.
ಶಿಬಿರದಲ್ಲಿ ಬದಾಮಿಯ ಕರೂಡಗಿಮಠ ಮೆಮೋರಿಯಲ್ ನರ್ಸಿಂಗ್ ಹೋಮ್ ಸಿಬ್ಬಂದಿ ಪ್ರಸೂತಿ ಮತ್ತು ಸ್ತ್ರೀರೋಗ, ಮಕ್ಕಳ ರೋಗ, ಮಧುಮೇಹ, ರಕ್ತದೊತ್ತಡ, ಇಸಿಜಿ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ನಡೆಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಪ್ಪ ಹುಲ್ಲೂರ ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ತೆವರಪ್ಪ ಚಿಕನಾಳ, ಭೀಮಪ್ಪ ಪೂಜಾರ, ಬಸವರಾಜ ತಳವಾರ, ಹನುಮಂತ ರೊಟ್ಟಿ ಹಾಗೂ ಹನುಮಗೌಡ ಹಿರೇಹಾಳ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.