ಯಲಬುರ್ಗಾ: ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಸೋಂಪೂರ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯಕ್ರಮ ಜರುಗಿತು.

ಈ ವೇಳೆ ಮಾತನಾಡಿದ ಪಿಡಿಒ ರತ್ನಮ್ಮ ಗುಂಡಣ್ಣವರ, ‘ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಹೆಚ್ಚಿನ ಕೆಲಸ ಹಾಗೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಿದೆ. ವಿಶ್ರಾಂತಿ ರಹಿತ ಕೆಲಸ ಕೂಡಾ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಆರೋಗ್ಯ ತಪಾಸಣೆಗೆ ಸರ್ಕಾರ ವಿಶೇಷ ಆಸಕ್ತಿ ತೋರಿದೆ’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕಳಕಪ್ಪ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿದರು. ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು, ಕೂಲಿಕಾರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.