ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಲ್ಸ್‌: ಲೇಸರ್ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ

Last Updated 10 ಮಾರ್ಚ್ 2022, 3:01 IST
ಅಕ್ಷರ ಗಾತ್ರ

ಗಂಗಾವತಿ: ಇಲ್ಲಿನ ಉಪವಿಭಾಗ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳು ಪೈಲ್ಸ್ ಗೆ ಲೇಸರ್ ತಂತ್ರಜ್ಞಾನದ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ತಾಲ್ಲೂಕು ಆಸ್ಪತ್ರೆ ರಾಜ್ಯಕ್ಕೆ ಮಾದರಿಯಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯಲ್ಲ. ನೆಪಕ್ಕೆ ಡಾಕ್ಟರ್ ಇರ್ತಾರೇ, ಕಾಳಜಿ ವಹಿಸಲ್ಲ ಎಂಬ ದೂರುಗಳ ನಡುವೆ ಗಂಗಾವತಿಯಲ್ಲಿನ ಉಪವಿಭಾಗ ಆಸ್ಪತ್ರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಮ್ಮೆ ಪಡೆದಿದೆ.

ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ಇದೀಗ ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವಂತೆ ಮಾಡಿ, ಲೇಸರ್ ಶಸ್ತ್ರಚಿಕಿತ್ಸೆ ಮೂಲಕ ಪೈಲ್ಸ್‌ಗೆ ಶಾಶ್ವತ ಪರಿಹಾರ ಒದಗಿಸಿದೆ.

ಈ ಲೇಸರ್ ಶಸ್ತ್ರಚಿಕಿತ್ಸೆ ಯಶಸ್ವಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿಕಿತ್ಸೆಯ ವಿಧಾನ: ರೋಗಿಗೆ ಮೂಲ್ಯವಾಧಿ ಕಾಣಿಸಿಕೊಂಡರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ
ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಬಹುದಿತ್ತು. ಇದೀಗ ಪೈಲ್ಸ್‌ಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಲೇಸರ್ ತಂತ್ರಜ್ಞಾನ ಬಳಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ವೈದ್ಯರ ತಂಡ ಹೈಟೆಕ್ ಆಸ್ಪತ್ರೆಗಳಿಗೆ ಸಡ್ಡುಹೊಡೆಯುವ ರೀತಿಯಲ್ಲಿ ಪೈಲ್ಸ್ ಗೆ ಶಸ್ತ್ರಚಿಕಿತ್ಸೆ ಮೂಲಕ ಚಿಕಿತ್ಸೆ ನೀಡಿದ್ದಾರೆ.

ಲೇಸರ್ ಶಸ್ತ್ರಚಿಕಿತ್ಸೆಯಲ್ಲಿ ಚೂಪಾದ ಸಾಧನಗಳನ್ನು ಬಳಸಿ, ಪೈಲ್ಸ್ ನ ಮೊಳಕೆಗಳನ್ನು ಸ್ಥಳದಲ್ಲಿಯೇ ಲೇಸರ್ ಮೂಲಕ ಕರಿಗಿಸಲಾಗುತ್ತದೆ. ಮೊಳಕಗಳಲ್ಲಿ ರಕ್ತ ಹೆಪ್ಪುಗಟ್ಟಿ ಕರಗುತ್ತದೆ. ಈ ಚಿಕಿತ್ಸೆಯನ್ನು ಕೇವಲ 15 ನಿಮಿಷಗಳಲ್ಲೇ ಮುಗಿಸಿರುವುದು ಹೆಮ್ಮೆ ವಿಷಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT