ಕೊಪ್ಪಳ: ‘ಜಿಲ್ಲೆಯಾದ್ಯಂತ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಆರೋಗ್ಯ ಕಾಪಿಟ್ಟುಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕಾನಂದಾ.ಡಿ.ಮಳಗಿ ಅವರು ಸಲಹೆ ನೀಡಿದ್ದಾರೆ.

ಮನೆಯಿಂದ ಹೊರಗಡೆ ಹೋಗುವಾಗ ತಪ್ಪದೇ ಶುದ್ಧ ಕುಡಿಯುವ ನೀರು ಹಾಗೂ ಮಾಸ್ಕ್ ತೆಗೆದುಕೊಂಡು ಹೋಗಬೇಕು. ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು. ಬಿಸಿಲಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು ಆದಷ್ಟು ಬೆಳಿಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ನಂತರ ಕೆಲಸ ಮಾಡುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿ ಬಟ್ಟೆ ಧರಿಸಬೇಕು. ಹತ್ತಿಯ ನುಣುಪಾದ ಬಟ್ಟೆ/ ಕರವಸ್ತ್ರದಿಂದ ಬೆವರನ್ನು ಒರಿಸಿಕೊಳ್ಳಬೇಕು.

ಹೀಗೆ ಇರಲಿ: ನೀರು, ಮಜ್ಜಿಗೆ ಮತ್ತು ಎಳನೀರು ಕುಡಿಯಬಹುದು. ಬೆಚ್ಚಗಿನ ಮಸಾಲೆ ರಹಿತ ಶುದ್ಧ-ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂಥ ಪಾದರಕ್ಷೆಗಳನ್ನು ಧರಿಸಬೇಕು. ವ್ಯಕ್ತಿಯು ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡ-ಬಡಿಸಿದಲ್ಲಿ ಕೂಡಲೇ ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಬೇಕು. ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ಉಸಿರಾಟದ ತೊಂದರೆಯಾದರೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು.

ಇದು ಬೇಡ: ಅತಿ ಬಿಗಿಯಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು. ಕುಷನ್‌ಯುಕ್ತ ಕುರ್ಚಿಯಲ್ಲಿ ಕೂಡಬೇಡಿ. ಸೋಡಾ ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ. ಬೆವರನ್ನು ಒರೆಸಲು ಒರಟಾದ ಬಟ್ಟೆ ಉಪಯೋಗಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.