ಕುಕನೂರು: ಪಟ್ಟಣದ ಕಸವನ್ನು ಸಮೀಪದ ಗಾವರಾಳ ಗ್ರಾಮದ ರಸ್ತೆಯ ಬದಿ ಸುರಿಯುತ್ತಿದ್ದು, ತ್ಯಾಜ್ಯ ಸಂಗ್ರಹ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

55 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣದ 19 ವಾರ್ಡ್ಗಳಿಂದ ದಿನಕ್ಕೆ 40 ಟನ್ ಕಸ ಸಂಗ್ರಹವಾಗುತ್ತದೆ. ಸದ್ಯ 20 ಕಿ.ಮೀ ವ್ಯಾಪ್ತಿ ಹೊಂದಿರುವ ಪಟ್ಟಣಕ್ಕೆ ಮತ್ತಷ್ಟು ಪ್ರದೇಶಗಳು ಸೇರ್ಪಡೆಯಾಗುತ್ತಿದ್ದು, ಇದರಿಂದ ಪಟ್ಟಣದಲ್ಲಿ ಉತ್ಪಾದನೆಯಾಗುವ ಕಸದ ಪ್ರಮಾಣವೂ ಹೆಚ್ಚಿದೆ.

ಗಾವರಾಳ ಗ್ರಾಮದ ಸರ್ವೆ ನಂ. 98ರ ಸರ್ಕಾರಿ ಜಮೀನಿನಲ್ಲಿ ತ್ಯಾಜ್ಯ ಸುರಿಯುತ್ತಿರುವುದರಿಂದ ಇದರ ಸುತ್ತಮತ್ತ ಕೃಷಿ ಜಮೀನು ಹೊಂದಿರುವ ರೈತರಿಗೆ ಕೃಷಿ ಚಟುವಟಿಕೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಈ ರಸ್ತೆಯಲ್ಲಿ ತೆರಳುವವರಿಗೆ ದುರ್ವಾಸನೆ ಬೀರುತ್ತಿದೆ. ಆದ್ದರಿಂದ ಇಲ್ಲಿ ಕಸ ಹಾಕುತ್ತಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಪೈಪ್ಲೈನ್ ಮೇಲೆ ತ್ಯಾಜ್ಯ ಸಂಗ್ರಹ:

ತ್ಯಾಜ್ಯ ಸಂಗ್ರಹದ ಸ್ಥಳದ ಹತ್ತಿರ ಪಟ್ಟಣ ಹಾಗೂ ಗಾವರಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 9 ಕೊಳವೆಬಾವಿಗಳ ಪೈಪ್ಲೈನ್ ಗಳ ಮೇಲೆ ತ್ಯಾಜ್ಯ ಸುರಿಯಲಾಗಿದೆ. ಅಲ್ಲಲ್ಲಿ ಪೈಪ್ಲೈನ್ ಒಡೆದು ತ್ಯಾಜ್ಯವು ಕುಡಿಯುವ ನೀರು ಸೇರುತ್ತಿದೆ. ಇದರಿಂದ ನೀರು ಕಲುಷಿತಗೊಂಡು ಜನರು ರೋಗಭೀತಿಯಿಂದ ಹೆದರುವಂತಾಗಿದೆ ಎಂದು ಗ್ರಾಮದ ನಿವಾಸಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ತ್ಯಾಜ್ಯದಿಂದ ಉಂಟಾಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಪಟ್ಟಣ ಪಂಚಾಯಿತಿ ಮುಂದಾಗಿಲ್ಲ. ಸಂಗ್ರಹವಾದ ತ್ಯಾಜ್ಯವನ್ನು ಬೇರೆಡೆ ವಿಲೇವಾರಿ ಮಾಡಲು ಕ್ರಮ ಕೈಗೊಂಡಿಲ್ಲ. ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಗ್ರಾಮಸ್ಥ ಮಾರುತಿ ಹೊಸಮನಿ ಆರೋಪಿಸಿದರು.

ಬೆಣಕಲ್ ಗ್ರಾಮದ ಕೆರೆಗೆ ತ್ಯಾಜ್ಯ ನೀರು: ತ್ಯಾಜ್ಯ ಸಂಗ್ರಹ ಸ್ಥಳದ ಮೂಲಕ ಹರಿದು ಹೋಗುವ ತ್ಯಾಜ್ಯ ನೀರು ಬೆಣಕಲ್ ಕೆರೆ ಸೇರಿ ಮಲಿನಗೊಳ್ಳುತ್ತಿದೆ. ಈ ಕೆರೆಯ ನೀರನ್ನು ಕುಡಿಯಲು ಬಳಸುವುದರಿಂದ ಜನರು ತೊಂದರೆಗೆ ಒಳಗಾಗಿದ್ದಾರೆ. ಈ ಕುರಿತು ಬೆಣಕಲ್ ಗ್ರಾಮಸ್ಥರಿಂದ ಸಾಕಷ್ಟು ಬಾರಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.