ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರವಣ ದೋಷ ನಿವಾರಣಾ ಕಾರ್ಯಕ್ರಮ; 120 ಮಕ್ಕಳ ಪರೀಕ್ಷೆ

Published 14 ಡಿಸೆಂಬರ್ 2023, 15:51 IST
Last Updated 14 ಡಿಸೆಂಬರ್ 2023, 15:51 IST
ಅಕ್ಷರ ಗಾತ್ರ

ಕಾರಟಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿವಾರಣೆ ಮತ್ತು ನಿಯಂತ್ರಣ ಕಾರ್ಯಕ್ರಮ ನಡೆಯಿತು.

ಮಕ್ಕಳ ತಜ್ಞ ಡಾ. ಅವಿನಾಶ್, ಕಿವಿ, ಮೂಗು ಹಾಗೂ ಗಂಟಲು ತಜ್ಞರಾದ ಡಾ.ಪದ್ಮಶಾಲಿ, ಡಾ.ಭರತ್ ದೇಸಾಯಿ, ಡಾ.ವಸುಧಾ ಎಲ್.ಎನ್ ಮತ್ತು ಆಡಿಯೋಲಜಿಸ್ಟ್ ಬಿಂದು ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳ ಶ್ರವಣ ದೋಷ ಮತ್ತಿತರ ಆರೋಗ್ಯ ತಪಾಸಣೆ ಮಾಡಿದರು.

120ಕ್ಕೂ ಹೆಚ್ಚು ಮಕ್ಕಳಿಗೆ ಕಿವಿಗೆ ಸಂಬಂಧಿಸಿದ ದೋಷದ ಬಗ್ಗೆ ಪರೀಕ್ಷಿಸಿ, ಚಿಕಿತ್ಸೆ ನೀಡಿದರು. ಆಡಳಿತ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಡಾ. ನಾಗರಾಜ, ಡಾ.ನೌಷದ, ಡಾ.ಅರ್ಪಿತ, ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT