ಗಂಗಾವತಿ: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟ ಏರುವಾಗ ಯುವಕನೊಬ್ಬನಿಗೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಕುಷ್ಟಗಿ ತಾಲ್ಲೂಕಿನ ವಣಗೇರಿ ಗ್ರಾಮದ ವೀರೇಶ ನಿಂಗಪ್ಪ(24) ಮೃತ ಯುವಕ.
ಯುವಕ ವೀರೇಶ, ನಾಲ್ವರು ಗೆಳೆಯರ ಜತೆ ಅಂಜನಾದ್ರಿ ದರ್ಶನಕ್ಕೆ ಬಂದಿದ್ದರು. ಮಧ್ಯಾಹ್ನ ಬೆಟ್ಟ ಏರುವಾಗ ಮೂರ್ಛೆ ಬಂದು ಮೆಟ್ಟಿಲು ಮೇಲೆ ಬಿದ್ದರು. ಆಗ ಜತೆಗಿದ್ದವರು ಮತ್ತು ದೇವಸ್ಥಾನ ಸಿಬ್ಬಂದಿ ಆಟೊ ಮೂಲಕ ಆನೆಗೊಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ‘ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.