ಬುಧವಾರ, ಡಿಸೆಂಬರ್ 1, 2021
21 °C

ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದೆ. ದಿನವಿಡೀ ಮೋಡಕವಿದು, ವಾತಾವರಣ ತಂಪಾಗಿತ್ತು. ಮಧ್ಯಾಹ್ನ ಆರಂಭವಾದ ಜಿಟಿಜಿಟಿ ಮಳೆ, ಬಳಿಕ ಬಿರುಸಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ನಗರದ ಹಳೆಯ  ಪ್ರದೇಶಗಳಲ್ಲಿ ಚರಂಡಿಗಳು ಕಟ್ಟಿಕೊಂಡು ರಸ್ತೆಯ ಮೇಲೆಯೇ ನೀರು ಹರಿಯಿತು. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಭಾಗ್ಯನಗರ, ಕುಕನೂರ, ಯಲಬುರ್ಗಾ ಸುತ್ತಮುತ್ತ
ಉತ್ತಮ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.