ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಳವಂಡಿ: ‘ಮಕ್ಕಳ ಕಲಿಕೆಗೆ ಕೈಜೋಡಿಸಿ’

Published 27 ಆಗಸ್ಟ್ 2023, 16:27 IST
Last Updated 27 ಆಗಸ್ಟ್ 2023, 16:27 IST
ಅಕ್ಷರ ಗಾತ್ರ

ಅಳವಂಡಿ: ‘ಪಾಲಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಕಲಿಕೆಗೆ ಕೈಜೋಡಿಸುವ ಜೊತೆಗೆ ಪ್ರೋತ್ಸಾಹಿಸಬೇಕು’ ಎಂದು ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ ಹೇಳಿದರು.

ಸಮೀಪದ ಬೆಳಗಟ್ಟಿ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿ.ಪಂ ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಕೆಆರ್‌ಡಿಬಿ, ಕಲಿಕೆ ಟಾಟಾ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಅಂಗವಾಗಿ ನಡೆದ ಪೋಷಕರ ನಡೆ ಅಂಗನವಾಡಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಅತಿ ಅವಶ್ಯ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳೊಂದಿಗೆ ಚಟುವಟಿಕೆಯ ಮೂಲಕ ಭಾಗವಹಿಸುವ ಮೂಲಕ ಮಕ್ಕಳ ಮನಸ್ಸನ್ನು ಗೆದ್ದು ಆಟ ಪಾಠ ಮಾಡಿಸಬೇಕು ಎಂದು ಹೇಳಿದರು.

ಪ್ರಮುಖರಾದ ಸಾವಿತ್ರಿ ಚಿಲವಾಡಗಿ, ಅಂಗನವಾಡಿ ಕಾರ್ಯಕರ್ತೆಯರಾದ ಸರೋಜಾ ಕೊರ್ಲಗಟ್ಟಿ, ರುಕ್ಮಿಣ ಕುರ್ತಕೋಟಿ, ಸಹಾಯಕಿಯರಾದ ಶೋಭಾ ಪಾಟೀಲ, ಪಕೀರಮ್ಮ, ಆರೋಗ್ಯ ಸುರಕ್ಷತಾಧಿಕಾರಿ ಸುಜಾತಾ ಇಟಗಿ, ಆಶಾ ಕಾರ್ಯಕರ್ತೆ ಜೈತುನಬಿ ಒಂಟಿ ಹಾಗೂ ಬಾಲವಿಕಾಸ ಸಮಿತಿ ಸದಸ್ಯರು, ಪಾಲಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT