ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಕುಡಿಯುವ ನೀರು; ಸಹಾಯವಾಣಿ ಆರಂಭ

Published 5 ಮಾರ್ಚ್ 2024, 14:18 IST
Last Updated 5 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ಕಾರಟಗಿ: ಬೇಸಿಗೆಯ ಬಿರುಬಿಸಿಲಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಿರಲು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಕುಡಿಯುವ ನೀರಿನ ವಿಷಯಕ್ಕೆ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯನ್ನು ಸಂಪರ್ಕಿಸಿ, ದೂರು ದಾಖಲಿಸಬಹುದು ಅಥವಾ ದೂರವಾಣಿ ಸಂಖ್ಯೆ 08533- 274232ಗೆ ಸಂಪರ್ಕಿಸಿ, ಸಮಸ್ಯೆ ತಿಳಿಸಿದರೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗುವರು.
ಸಾರ್ವಜನಿಕರು ಇದರ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಮೌನೇಶ್ವರ ಉತ್ಸವ ಮಾ. 7ರಿಂದ ಕಾರಟಗಿ: ಪಟ್ಟಣದ ಶ್ರೀಗುರು ಮೌನೇಶ್ವರರ ಉತ್ಸವ ಮಾ.7ರಿಂದ 10ರವರೆಗೆ ನಡೆಯಲಿದೆ ಎಂದು ಕಾಳಮ್ಮ ಬಡಿಗೇರ ತಿಳಿಸಿದ್ದಾರೆ.

ಮಾ.7ರಂದು ಮಜಾರ್‌ ಪೂಜೆ, 8ರಂದು ಮೌನೇಶ್ವರ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ, ಸಂಜೆ ಪುರಾಣ ಪ್ರವಚನ, 9ರಂದು ಅನ್ನಸಂತರ್ಪಣೆ, 10ರಂದು ಗಂಗಾಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

4 ದಿನಗಳವರೆಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT