ಶುಕ್ರವಾರ, ಸೆಪ್ಟೆಂಬರ್ 17, 2021
22 °C
ಜಿಲ್ಲಾ ಪಂಚಾಯಿತಿ ಸಿಇಒ ಫೌಜೀಯಾ ತರುನ್ನಮ್

ಸಕಾಲಿಕವಾಗಿ ಕೂಲಿ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಕೊಪ್ಪಳ: ನರೇಗಾ ಸೇರಿದಂತೆ ಪಂಚಾಯಿತಿ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜೀಯಾ ತರುನ್ನಮ್‌ ಸೂಚನೆ ನೀಡಿದರು.

ಅವರು ತಾಲ್ಲೂಕಿನ ಹಿರೇಬಗ ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಅನುಷ್ಠಾನ ಗೊಳ್ಳುತ್ತಿರುವ ಹಿರೇಕಾಸನ ಕಂಡಿ ಗ್ರಾಮದಲ್ಲಿನ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುವ ಕೂಲಿಕಾರರೊಂದಿಗೆ ಕೂಲಿ ಕೆಲಸ ನೀಡುತ್ತಿರುವ ಮತ್ತು ಕೂಲಿ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿರುವ ಕುರಿತು ಕೂಲಿಕಾರಳಾದ ವೃದ್ದೆ ಮಾರೆಮ್ಮ ಇವರ ಜೊತೆ ಚರ್ಚೆ ನಡೆಸಿದರು.

'ಕಾಮಗಾರಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರು ತಮ್ಮ ಮುಖಕ್ಕೆ ಮಾಸ್ಕ್‌ ಧರಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಇದರಿಂದ ಭಯಾನಕ ಮಾರಕವಾದ ಕೊವಿಡ್-19 ತಪ್ಪಿಸಬಹುದಾಗಿದೆ. ಈಗಾಗಲೇ ಹಿರೇಬಗನಾಳ ಗ್ರಾಮ ಪಂಚಾಯಿತಿಯಿಂದ ವಿವಿಧ ಕಾಮಗಾರಿಗಳನ್ನು ಅನುಷ್ಠಾನ ಮಾಡಿರುವ ಕುರಿತು ಪಿಡಿಒ ಮತ್ತು ತಾಂತ್ರಿಕ ಸಹಾಯಕರು ವಿವರಿಸಿದರು.

ಕಾಮಗಾರಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಕುಡಿಯುವ ನೀರು ಸೌಲಭ್ಯ ಕುರಿತು ಪರಿಶೀಲಿಸಿದರು. ನರೇಗಾ ಯೋಜನೆಯಡಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಕೂಲಿ ಕೆಲಸ ನಿರ್ವಹಿಸಿ ಆರ್ಥಿಕ ಸಬಲರಾಗ ಬೇಕು ಎಂದು ಮನವಿ ಮಾಡಿದರು.

ನರೇಗಾ ಕೂಲಿಕಾರರಿಗೆ ಎನ್‍ಎಂಆರ್ ಅವಧಿ ಮುಕ್ತಾಯವಾದ ನಂತರ 7 ದಿನಗಳ ಒಳಗಾಗಿ ಕೂಲಿ ಹಣ ಪಾವತಿಸುವುದು ಕಡ್ಡಾಯವಾಗಿ ಇರುವುದರಿಂದ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಪಾವತಿಗೆ ಕ್ರಮವಹಿಸಿ ಎಂದು ಹಾಜರಿದ್ದ ಸಿಬ್ಬಂದಿಗೆ ಸೂಚಿಸಿದರು.

ನಂತರ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಳಗಳ ಸಂಪರ್ಕ ಕಲ್ಪಿಸಿರುವ ಕುರಿತು ಭೌತಿಕವಾಗಿ ಪರಿಶೀಲಿಸಿ ಫಲಾನುಭವಿಗಳ ಜೊತೆ ಚರ್ಚಿಸಿದರು. ನಂತರ ಹೊನ್ನೂರಮಟ್ಟಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಕಸ ಸಂಗ್ರಹಣೆ ಮತ್ತು ವಿಲೇವಾರಿ ಕುರಿತು ಟಿ.ಜನಾರ್ಧನ ಹುಲಿಗಿ ಅವರ ಜೊತೆ ಪರಿಶೀಲನೆ ನಡೆಸಿದರು. 

ಜಿ.ಪಂ.ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾ.ಪಂ. ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ವಿಲಾಸ ಬೋಸ್ಲೆ, ಹುಲಿಗಿ ಗ್ರಾಮ ಪಂಚಾಯತ ಅಧ್ಯಕ್ಷ ಯಮನೂರಪ್ಪ, ಹಿರೇಬಗನಾಳ, ಪಿಡಿಒ ಗುರುಸಿದ್ದಪ್ಪ ಜಲವಾದಿ, ಪರಮೇಶ್ವರಯ್ಯ, ಕೃಷ್ಣಮೂರ್ತಿ ಹಲಗೇರಿ, ದೇವರಾಜ ಪತ್ತಾರ, ಪ್ರವೀಣ ಗದಗ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.