ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಮೃತ ಪಿಎಸ್ಐ ಪರಶುರಾಮ್ ಕುಟುಂಬಕ್ಕೆ ಗೃಹಸಚಿವ ಪರಮೇಶ್ವರ್ ಸಾಂತ್ವನ

Published 7 ಆಗಸ್ಟ್ 2024, 7:05 IST
Last Updated 7 ಆಗಸ್ಟ್ 2024, 7:05 IST
ಅಕ್ಷರ ಗಾತ್ರ

ಸೋಮನಾಳ: ಶಂಕಾಸ್ಪದ ರೀತಿಯಲ್ಲಿ ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕುಟುಂಬದವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸಾಂತ್ವನ ಹೇಳಿದರು.

ಪರಶುರಾಮ್ ಸ್ವಗ್ರಾಮ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಬುಧವಾರ ಬಂದ ಸಚಿವರು ಮೊದಲು ಕುಟುಂಬದವರ ಜೊತೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಪರಶುರಾಮ್ ಸಾವಿನ ಬಗ್ಗೆ ಈಗಾಗಲೇ ಎಫ್ಐಆರ್ ದಾಖಲಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ಇದರ ಬಗ್ಗೆ ಯಾವುದೇ ಅಪನಂಬಿಕೆ ಬೇಡ, ನಮ್ಮ ಸರ್ಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತದೆ ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಪ್ರಸಾದ್ ಅಬ್ಬಯ್ಯ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT