ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇನು ಸಾಕಾಣಿಕೆ: ಆದಾಯ ವೃದ್ಧಿ, ಮಹಮ್ಮದ್ ರಫೀ ಅಭಿಮತ

ತರಬೇತಿ ಕಾರ್ಯಾಗಾರದಲ್ಲಿ ತಾ.ಪಂ. ಅಧ್ಯಕ್ಷ ಮಹಮ್ಮದ್ ರಫೀ ಅಭಿಮತ
Last Updated 16 ಫೆಬ್ರುವರಿ 2021, 12:12 IST
ಅಕ್ಷರ ಗಾತ್ರ

ಗಂಗಾವತಿ: ‘ರೈತರು ಕೃಷಿಯ ಜತೆಗೆ ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡು ಆದಾಯ ಗಳಿಸಬಹುದು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫೀ ಹೇಳಿದರು.

ತಾಲ್ಲೂಕು ಪಂಚಾಯಿತಿಯು ತೋಟಗಾರಿಕೆ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ರೈತರಿಗೆ ಮಂಗಳವಾರ ಆಯೋಜಿಸಿದ್ದ ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ
ಅವರು ಮಾತನಾಡಿದರು.

‘ಬೇಸಾಯ ನೆಚ್ಚಿಕೊಂಡು ಬದುಕುತ್ತಿರುವ ರೈತರು ಕೇವಲ ಕೃಷಿಯ ಮೇಲೆ ಅವಲಂಬನೆಯಾಗಬಾರದು. ಜತೆಗೆ ಹೈನುಗಾರಿಕೆ, ಕೋಳಿ ಹಾಗೂ ಮೇಕೆ ಸಾಕಾಣಿಕೆಯಲ್ಲಿ ತೊಡಗಿಕೊಳ್ಳಬೇಕು’ ಎಂದರು.

‘ಇಲಾಖೆಯವರು ಸಂಪೂರ್ಣ ಸಹಕಾರ ನೀಡುತ್ತಾರೆ. ರೈತರು ತರಬೇತಿ ಪಡೆದುಕೊಳ್ಳಬೇಕು. ಇದರಿಂದ ಆದಾಯ ದ್ವಿಗುಣವಾಗುತ್ತದೆ’ ಎಂದು ಅವರು ಕಿವಿಮಾತು ಹೇಳಿದರು.

ನಂತರ ರೈತರಿಗೆ ತರಬೇತಿ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ, ಕೆವಿಕೆ ಮುಖ್ಯಸ್ಥ ಡಾ.ಎಂ.ವಿ.ರವಿ, ಸಿಡಿಪಿಒ ಗಂಗಪ್ಪ ಮತ್ತು ಪ್ರಮುಖರಾದ ಡಾ.ರಾಘವೇಂದ್ರ ಎಲಿಗಾರ ಹಾಗೂ ರೈತರು ಸಮಾರಂಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT