ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಹೈದರ ಘರ್ಷಣೆ: ಮೂವರು ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರು ಅಮಾನತು

Last Updated 25 ಆಗಸ್ಟ್ 2022, 15:50 IST
ಅಕ್ಷರ ಗಾತ್ರ

ಕೊಪ್ಪಳ: ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಆಗಸ್ಟ್‌ 11ರಂದು ನಡೆದಿದ್ದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಧಿಕಾರಿಯನ್ನು ಗುರುವಾರ ಅಮಾನತು ಮಾಡಲಾಗಿದೆ.

‘ತಪ್ಪಿಸಬಹುದಾಗಿದ್ದ ಘಟನೆ ಬಗ್ಗೆ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಕನಕಗಿರಿ ಪೊಲೀಸ್‌ ಠಾಣೆಯ ಇನ್‌ಸ್ಟೆಕ್ಟರ್‌ ಪರಸಪ್ಪ ಭಜಂತ್ರಿ, ಎಎಸ್‌ಐ ಮಂಜುನಾಥ್, ಹೆಡ್‌ ಕಾನ್‌ಸ್ಟೆಬಲ್‌ಗಳಾದ ಹನುಮಂತ ಮತ್ತು ಸಂಗಪ್ಪ ಮೇಟಿ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಖಚಿತಪಡಿಸಿದ್ದಾರೆ.

‘ಘರ್ಷಣೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಎರಡೂ ಕುಟುಂಬದವರಿಂದ ಒಟ್ಟು 58 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಒಟ್ಟು 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಗ್ರಾಮದ ವಾತಾವರಣ ಸಹಜ ಸ್ಥಿತಿಗೆ ಮರಳಿರುವ ಕಾರಣ ನಿಷೇಧಾಜ್ಞೆ ವಾಪಸ್‌ ಪಡೆಯಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT