ಭಾನುವಾರ, ಆಗಸ್ಟ್ 1, 2021
26 °C
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಹೇಳಿಕೆ

30 ರವರೆಗೆ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬರುವ ಭಕ್ತರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಜೂನ್‌ 30 ರವರೆಗೆ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರುವುದಿಲ್ಲ. 

ತಾಲ್ಲೂಕಿನ ಹುಲಿಗೆಮ್ಮ ದೇವಿ ದೇವಸ್ಥಾನ ಅಧಿಸೂಚಿತ ಎ ವರ್ಗದ ದೇವಸ್ಥಾನವಾಗಿದ್ದು, ಈ ದೇವಸ್ಥಾನಕ್ಕೆ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಪ್ರಸಕ್ತ ಸಾಲಿನಲ್ಲಿ ಹುಲಿಗೆಮ್ಮ ದೇವಿಯ ಜಾತ್ರೆ ರದ್ದಾಗಿದ್ದು, ಜಾತ್ರೆಯ ತರುವಾಯ ಜೂನ್ ತಿಂಗಳಿನ ಅಂತ್ಯದವರೆಗೆ ಹರಕೆ ತೀರಿಸಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಬಂದು ವಾಸ್ತವ್ಯ ಹೂಡುತ್ತಿದ್ದಾರೆ.

ದೇವಿ ದರ್ಶನಕ್ಕೆ ಬರುವ ಭಕ್ತರನ್ನು ನಿಯಂತ್ರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಭಿಪ್ರಾಯ ಹಾಗೂ ಹುಲಿಗಿ ಗ್ರಾಮ ಪಂಚಾಯಿತಿ ಠರಾವಿನ ಪ್ರಕಾರ ಜೂನ್ ಅಂತ್ಯದವರಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು