ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗೆಮ್ಮ ದೇವಸ್ಥಾನ ವಿಶೇಷ ಅನುದಾನದ ಭರವಸೆ

Published 20 ಏಪ್ರಿಲ್ 2024, 4:24 IST
Last Updated 20 ಏಪ್ರಿಲ್ 2024, 4:24 IST
ಅಕ್ಷರ ಗಾತ್ರ

ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಶಕ್ತಿದೇವತೆ ಹುಲಿಗಿಯ ಹುಲಿಗೆಮ್ಮದೇವಿ ಸನ್ನಿಧಾನಕ್ಕೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಶುಕ್ರವಾರ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿ ‘ನೆರೆರಾಜ್ಯಗಳಿಂದ ಭಕ್ತರು ಹುಲಿಗೆಮ್ಮದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಭಕ್ತರ ಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿ ಮಾಡುವ ಸಂಕಲ್ಪ ಮಾಡಿದ್ದೇನೆ. ಹುಲಿಗೆಮ್ಮದೇವಿಯ ಆಶೀರ್ವಾದ, ಜನರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.

‘ಕ್ಷೇತ್ರವು ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಕಳೆದ ಅಧಿವೇಶನದಲ್ಲಿ ಹುಲಿಗೆಮ್ಮ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ ವಹಿಸಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವೆ’ ಎಂದು ಭರವಸೆ ನೀಡಿದರು.

ಕ್ರಮಕ್ಕೆ ಆಗ್ರಹ: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ  ಹತ್ಯೆ ಅತ್ಯಂತ ದುರದೃಷ್ಟಕರವಾಗಿದ್ದು ರಾಜ್ಯ ಸರ್ಕಾರ ಆರೋಪಿಯನ್ನು ಧರ್ಮದ ಆಧಾರದ ಮೇಲೆ ನೋಡದೆ ಆತ ಮಾಡಿರುವ ತಪ್ಪಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಕ್ಯಾವಟರ್‌ ಆಗ್ರಹಿಸಿದ್ದಾರೆ.

ಭಾಗ್ಯನಗರದ ಬಿಜೆಪಿ ಕಾರ್ಯಕರ್ತ ಪರುಶುರಾಮ ಹಾಗೂ ಕುಟುಂಬದವರು ಕೊಲೆಯಾದ ಘಟನೆ ಬಗ್ಗೆ  ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT