ಮುನಿರಾಬಾದ್: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾಸ್ಥಳ ಹುಲಿಗಿಯ ಹುಲಿಗೆಮ್ಮದೇವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ‘ವಿಶಿಷ್ಟ ದಾಸೋಹ’ಕ್ಕೆ ಸಂಸದ ರಾಜಶೇಖರ ಹಿಟ್ನಾಳ ಅವರು ಭಾನುವಾರ ಚಾಲನೆ ನೀಡಿದರು.

ಭಾನುವಾರ (ಮೇ 10)ದಿಂದ ಒಂದು ತಿಂಗಳ ಕಾಲ ನಡೆಯುವ ವಿಶಿಷ್ಟ ದಾಸೋಹದಲ್ಲಿ ದೇವಿಯ ಭಕ್ತರಿಗೆ ಕಡಲೆ ಬೇಳೆ, ಪಾಯಸ, ಮಾದಲಿ, ಖಡಕ್ ರೊಟ್ಟಿ, ಬದನೆಕಾಯಿ ಪಲ್ಯ, ಈರುಳ್ಳಿ ಬಜಿ, ಮಸಾಲೆ ಮಜ್ಜಿಗೆ ರುಚಿಕರವಾದ ಭಕ್ಷ್ಯವನ್ನೊಳಗೊಂಡ ದಾಸೋಹದಲ್ಲಿ ದೇವಿಯ ಭಕ್ತರು ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮಕ್ಕೂ ಮೊದಲು ದೇವಸ್ಥಾನದ ಮುಂಭಾಗದಲ್ಲಿ ದಾಸೋಹಕ್ಕಾಗಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ನಲ್ಲಿ ಗೋ ಪೂಜೆ, ಹುಲಿಗೆಮ್ಮ ದೇವಿ ಮತ್ತು ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನ ಮುಂಭಾಗದ ಯಜ್ಞ ಮಂಟಪದಲ್ಲಿ ಚಂಡಿಕಾ ಹೋಮ ನೆರವೇರಿಸಿ, ಪೂರ್ಣಾಹುತಿ ನೀಡಲಾಯಿತು.

ಪೊಲೀಸ್ ಬಂದೋಬಸ್ತ್: ವಾರ್ಷಿಕ ಜಾತ್ರಾ ಮಹೋತ್ಸವದ ಭದ್ರತೆ ಹಿನ್ನೆಲೆ 500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ‘ಅಧಿಕಾರಿ ಮತ್ತು ಸಿಬ್ಬಂದಿಗಳು ನಿಯೋಜಿಸಿದ ಸ್ಥಳದಲ್ಲೇ ಇರಬೇಕು. ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ, ಕರ್ತವ್ಯ ನಿರ್ವಹಿಸಬೇಕು’ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ ಸೂಚನೆ ನೀಡಿದರು.

ವೈದ್ಯಕೀಯ ಸಿಬ್ಬಂದಿ ನಿಯೋಜನೆ: ಜಾತ್ರೆಯ ಸಂದರ್ಭದಲ್ಲಿ ಆರೋಗ್ಯ ಜಾಗೃತಿ ಮೂಡಿಸಲು. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ದೇವಸ್ಥಾನ ಆವರಣದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಆರೋಗ್ಯ ಕಾರ್ಯಕರ್ತರು, ಶುಶ್ರೂಷಕರನ್ನು ಆರೋಗ್ಯ ಶಿಕ್ಷಣಾಧಿಕಾರಿ ಸೇರಿದಂತೆ 30ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ಹುಲಿಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಫಿವುಲ್ಲಾ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸಿಬ್ಬಂದಿಗಳಿಗೆ ಸೂಚನೆ ನೀಡಲಾಯಿತು.

ಉಚಿತ ಸಾರಿಗೆ ವ್ಯವಸ್ಥೆ: ಜಾತ್ರೆಗೆ ಬರುವ ವೃದ್ಧರು, ಅಸಹಾಯಕ ಮಹಿಳೆಯರು ಮತ್ತು ಮಕ್ಕಳಿಗಾಗಿ 8 ಮಿನಿ ಬಸ್ಗಳನ್ನು ನಿಯೋಜಿಸಲಾಗಿದ್ದು, ಬಸ್ ನಿಲ್ಲುವ ಸ್ಥಳದಿಂದ ದೇವಸ್ಥಾನಕ್ಕೆ ಅವರನ್ನು ತಲುಪಿಸುವ ಕಾರ್ಯ ಮಾಡಲಾಗುತ್ತಿದೆ.

ಜಾತ್ರೆಯ ಅಧಿಕೃತ ಕಾರ್ಯಕ್ರಮ ಉದ್ಘಾಟನೆಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ (ಮೇ.11) ಆಗಮಿಸಲಿದ್ದು, ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಮಹಾ ರಥೋತ್ಸವ ಸಂದರ್ಭದಲ್ಲಿ ಮೂರು ಲಕ್ಷಕ್ಕೂ ಅಧಿಕ ಭಕ್ತರು, ಜಾತ್ರೆಯ ಮೊದಲ 15 ದಿನದಲ್ಲಿ 30 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.

ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್. ಪ್ರಕಾಶರಾವ್, ಪ್ರಾಧಿಕಾರದ ಸದಸ್ಯರಾದ ಶ್ರೀನಿವಾಸರಾವ್, ಶರಣುಗೌಡ ಪಾಟೀಲ್, ಪಾಲಾಕ್ಷಪ್ಪ ಗುಂಗಾಡಿ, ಈ.ಈರಣ್ಣ, ಪ್ರಮುಖರಾದ ವಿ. ಆರ್. ಪಾಟೀಲ್, ಪಂಪಾಪತಿ ರಾಟಿ, ವಿ. ವೆಂಕಟೇಶ, ಶಿವು ದಳಪತಿ, ವಿಶ್ವ ಪ್ರಾಣಿ ದಯಾ ಸಂಘದ ದಯಾನಂದ ಸ್ವಾಮಿ, ವಿಜಯಕುಮಾರ ಶೆಟ್ಟಿ, ಶರಣಪ್ಪ, ಚಂದನ್, ಹುಲುಗಪ್ಪ, ಹನುಮಂತಪ್ಪ ಹ್ಯಾಟಿ, ಹನುಮಂತ ಗಿಡ್ಡಾಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-35-303235310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.