ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗಿ: ವಿಶೇಷದಿನ ಹೊರತುಪಡಿಸಿ ದರ್ಶನಕ್ಕೆ ಅವಕಾಶ

ಹುಲಿಗಿ ಹುಲಿಗೆಮ್ಮದೇವಿ ದರ್ಶನ ಹುಣ್ಣಿಮೆಯಂದು ಮಾತ್ರ ನಿಷೇಧ
Last Updated 2 ಸೆಪ್ಟೆಂಬರ್ 2021, 3:59 IST
ಅಕ್ಷರ ಗಾತ್ರ

ಕೊಪ್ಪಳ: ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಿರ್ಬಂಧಿತ ದಿನ ಹೊರತುಪಡಿಸಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಕಾರಣ ಸಾರ್ವಜನಿಕರ ದರ್ಶನ ನಿಷೇಧಿಸಲಾಗಿತ್ತು. ಸರ್ಕಾರದ ಆದೇಶದನ್ವಯ ಹಾಗೂ ದೇವಸ್ಥಾನದಸಿಇಒ ಕೋರಿಕೆಯಂತೆ ಮುಂಜಾಗ್ರತೆ ಕ್ರಮ ಅನುಸರಿಸಿ ಸೆ. 01 ರಿಂದ 30 ರವರೆಗೆ ವಿಶೇಷ ದಿನಾಂಕಗಳಂದು ದರ್ಶನ ನಿರ್ಬಂಧಿಸಿ ಉಳಿದ ದಿನಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.

ಸೆ.7, 14, 21 ಮತ್ತು 28 ರಂದು ಹಾಗೂ ಸೆ.20ರ ಅನಂತ ಹುಣ್ಣಿಮೆ ಪ್ರಯುಕ್ತ ಸಾರ್ವಜನಿಕ ದರ್ಶನ ನಿರ್ಬಂಧಿಸಲಾಗಿದೆ. ಈ ನಿರ್ಬಂಧಿತ ದಿನಗಳಂದು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT