ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾಪ್ರಭುತ್ವ ದಿನಾಚರಣೆ; ಕೊಪ್ಪಳ ಜಿಲ್ಲೆ ಬೆಸೆದ 53 ಸಾವಿರ ಜನರ‌ ಮಾನವ ಸರಪಳಿ

Published : 15 ಸೆಪ್ಟೆಂಬರ್ 2024, 4:21 IST
Last Updated : 15 ಸೆಪ್ಟೆಂಬರ್ 2024, 4:21 IST
ಫಾಲೋ ಮಾಡಿ
Comments

ಕೊಪ್ಪಳ: ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಭಾನುವಾರ ಜಿಲ್ಲೆಯನ್ನು 53 ಸಾವಿರ ಜನರ ಮಾನವ ಸರಪಳಿ ಮೂಲಕ ಬೆಸೆಯಲಾಯಿತು.

ಜಿಲ್ಲೆಯ ಗಡಿಭಾಗ ಅಳವಂಡಿ ಸಮೀಪದ ಬೆಳಗಟ್ಟಿಯಿಂದ ಮುನಿರಾಬಾದ್‌ ಜಲಾಶಯ ತನಕ ಮಾನವ ಸರಪಳಿ ನಿರ್ಮಿಸಲಾಗಿತ್ತು.

ಗ್ಯಾರಂಟಿ ಯೋಜನೆ ಫಲಾನುಭವಿಗಳು, ವಿದ್ಯಾರ್ಥಿಗಳು, ಎನ್‌ಜಿಒಗಳ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಬೆಳಗಟ್ಟಿ ಗ್ರಾಮದಿಂದ ಪ್ರಾರಂಭವಾದ ಜಿಲ್ಲೆಯ ಮಾನವ ಸರಪಳಿ ಹಿರೇಸಿಂದೋಗಿ, ಚಿಕ್ಕಸಿಂದೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಜಲಾಶಯ ತನಕ ಜರುಗಿತು.

ಇಲ್ಲಿನ ಅಶೋಕ‌ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ನಾಡಗೀತೆ ಹಾಡಿ ಸಂವಿಧಾನದ ಪೀಠಿಕೆ ಓದಲಾಯಿತು.

 

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾತನಾಡಿ ಸೆಪ್ಟೆಂಬರ್15ರ ವಿಶೇಷ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗುವಂತೆ ಮಾಡಲು ಮಾನವ ಸರಪಳಿ ನಡೆಸಲಾಗಿದೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದು ನಮ್ಮ ಉದ್ದೇಶವಾಗಿದೆ' ಎಂದರು. ಈ ಕಾರ್ಯಕ್ರಮ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಬುನಾದಿಯಾಗಿದೆ ಎಂದರು.

ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಎಸ್. ಪಿ. ಹೇಮಂತ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT