ಶುಕ್ರವಾರ, ಸೆಪ್ಟೆಂಬರ್ 24, 2021
24 °C

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಪರಣ್ಣ ಮುನವಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ನಾನೂ ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಉತ್ತಮ‌ ಆಡಳಿತ ನಡೆಸಲಿದ್ದಾರೆ‌. ಕೊಪ್ಪಳ ಜಿಲ್ಲೆ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೊಡುಗೆ ಅಪಾರ. ಅವರ ಮಾರ್ಗದರ್ಶನದಲ್ಲಿ ಪಕ್ಷಕ್ಕೆ ದುಡಿಯುವುದೇ ನಮ್ಮ ಆದ್ಯ ಕರ್ತವ್ಯ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ನೀರಾವರಿ, ಶಿಕ್ಷಣ, ಉದ್ಯೋಗ, ಕಾಮಗಾರಿ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ. ಅದರಲ್ಲಿ ಗಂಗಾವತಿ ತಾಲ್ಲೂಕು ಸೂಕ್ಷ್ಮ ಪ್ರದೇಶವಾಗಿದ್ದು, ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ, ಜನ ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ.

ಈ ಬಾರಿ ಕೊಪ್ಪಳ ಜಿಲ್ಲೆಯಿಂದ ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಶೇ 100 ರಷ್ಟು ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿದ್ದೇನೆ ಎಂದರು.

ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಶಾಸಕ ಪರಣ್ಣ ಮುನವಳ್ಳಿ ಅವರು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದಾರೆ’ ಎಂದು ಹೇಳಿದರು.

ಆನೂತನ ಸಚಿವ ಸಂಪುಟದಲ್ಲಿ ಶಾಸಕರಿಗೆ ಸಚಿವ ಸ್ಥಾನದ ಜತೆಗೆ ಕೊಪ್ಪಳ ಜಿಲ್ಲಾ ಉಸ್ತವಾರಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಚೆನ್ನಪ್ಪ ಮಳಿಗಿ, ನಗರ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶಪ್ಪ ಹೊಸಮನಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಜಿ.ಪಂ ಸದಸ್ಯ ರಾಮಣ್ಣ ಚೌಡ್ಕಿ, ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ಯಮನೂರ ಚೌಡ್ಕಿ, ಬಿಜೆಪಿ ಪಕ್ಷ ಮುಖಂಡ ಜೋಗದ ಹನಮಂತಪ್ಪ ನಾಯಕ, ಶರಣಯ್ಯಸ್ವಾಮಿ ಮರಳಿಮಠ, ಆರ್.ದೇವಾನಂದ ಹೇಮಂತ್ ರಾಜ್, ರಾಚಪ್ಪ ಸಿದ್ದಾಪುರ, ನಾಗರಾಜ ಚಳಿಗೇರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.