ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಸಚಿವ ಬಿ.ಸಿ.ಪಾಟೀಲ್ 

Last Updated 26 ಮೇ 2021, 7:16 IST
ಅಕ್ಷರ ಗಾತ್ರ

ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ‌ಯಾರ ಹೇಳಿದ್ರೂ ನಿಮಗೆ. ಶಾಸಕಾಂಗ ಸಭೆ ಕರೆದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗತ್ತಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದರು.

ಅವರು ಬುಧವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಕೋವಿಡ್ ನಿರ್ವಹಣೆ ಸಭೆಯಲ್ಲಿ ಪಾಲ್ಗೊಳ್ಳಲು ಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರೊನಾ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆ ಕರೆಯಲಾಗಿದೆ. ಇದುವರೆಗೂ ನನಗೆ ಯಾವುದೇ ಮಾಹಿತಿ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ದಿನದಿಂದ ಬದಲಾವಣೆ ಆಗ್ತಾರೆ ಅನ್ನೋ ಮಾತಿದೆ. ತಿಂಗಳಿಗೊಮ್ಮೆ ಅದಕ್ಕೆ ಪುಷ್ಠಿ ಕೊಡ್ತಾರೆ. ಅದು ಠುಸ್ ಆಗುತ್ತೆ ಎಂದರು.

ಯುವತಿಯ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ನಾನೇ ಎಂದು ಒಪ್ಪಿಕೊಂಡಿದ್ದಾರೆ. ಟಿವಿಲಿ ನೋಡಿದ್ದೀರಾ ಅಲ್ಲ. ತನಿಖೆ ನಡೆಯುತ್ತಿದೆ. ನಾನೇನು ಮಾತಾಡಲ್ಲ ಎಂದು ರಮೇಶ ಜಾರಕಿಹೊಳಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿದರು.

ಎಲ್ಲ‌ ಮೆಡಿಕಲ್ ಕಾಲೇಜುಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಯಲ್ಲಿ ಲಾಕ್ ಡೌನ್ ಬಳಿಕ ಪರಿಸ್ಥಿತಿ ಸುಧಾರಿಸಿದೆ. ಪಾಸಿಟಿವ್ ರೇಟ್ ಕಡಿಮೆ ಆಗಿದೆ ಎಂದರು.

ನಮ್ಮ ಜಿಲ್ಲೆಯಲ್ಲಿ ಮೊದಲು ಮದುವೆಗೆ ನಿಷೇಧ ಮಾಡಲಾಗಿತ್ತು. ನಮ್ಮ ಜಿಲ್ಲೆ ನೋಡಿಕೊಂಡು ಬೇರೆ ಜಿಲ್ಲೆಯವರು ಮದುವೆ ನಿಷೇಧ ಮಾಡಿದೆ. ಅದರ ಮಧ್ಯೆಯೂ ಕೆಲವು ಮದುವೆಯಾದ ಬಗ್ಗೆ ಮಾಹಿತಿ ಇದೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

ಹೋಮ್ ಐಸೋಲೆಶನ್ ಅಲ್ಲಿದ್ದ 1000 ಕ್ಕೂ ಹೆಚ್ಚು ಜನರನ್ನು ಕೋವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.‌ ಮದುವೆಗೆ ನಿರ್ಭಂದ ಇದ್ದರೂ ನಗರಸಭೆಯ ಎಂಜಿನಿಯರ್ ಮದುವೆಯಾದ ಪ್ರಕರಣದ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT