ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಪ್ರಧಾನಿಯಾಗಲಿ ಎಂದು ಹೇಳಿದ್ದೇ ನಾನು: ಶಾಸಕ ಬಸವರಾಜ ರಾಯರಡ್ಡಿ

Published 26 ಡಿಸೆಂಬರ್ 2023, 16:19 IST
Last Updated 26 ಡಿಸೆಂಬರ್ 2023, 16:19 IST
ಅಕ್ಷರ ಗಾತ್ರ

ಕೊಪ್ಪಳ: ‘ರಾಜಕಾರಣದಲ್ಲಿ ಸಾಕಷ್ಟು ಅನುಭವ ಹೊಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಮೊದಲು ಆಗ್ರಹಿಸಿದ್ದೇ ನಾನು’ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಯಲಬುರ್ಗಾ ತಾಲ್ಲೂಕಿನ ಬೇವೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಖರ್ಗೆ ಅವರು ರಾಜಕೀಯಯದಲ್ಲಿ ಅನುಭವವಿರುವ ಕಾರಣ ಅವರು ಸೂಕ್ತ ಅಭ್ಯರ್ಥಿ. ಆ ಹುದ್ದೆಗೆ ಅವರ ಅರ್ಹತೂ ಇದ್ದಾರೆ’ ಎಂದರು.

‘ಗ್ಯಾರಂಟಿ ಯೋಜನೆಗೆ ಹಣವಿಲ್ಲ ಎನ್ನುವುದು ತಪ್ಪು. ರಾಜ್ಯ ಸರ್ಕಾರದಲ್ಲಿ ಅನುದಾನವಿದ್ದು, ಬರುತ್ತದೆ. 2004ರಿಂದ ಚುನಾವಣೆ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಮಾಡುವವರು ರಾಜಕೀಯಕ್ಕೆ ಬರುತ್ತಿದ್ದಾರೆ. ದಂಧೆ ಮಾಡುವವರು ರಾಜಕೀಯಕ್ಕೆ ಬರಬಾರದು ಎಂದು ಸಂವಿಧಾನದಲ್ಲಿ ಬರೆಯಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT