ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಕೆಟ್ ಕೊಡದಿದ್ದರೆ ರಾಜಕೀಯ ನಿವೃತ್ತಿ: ಸಂಗಣ್ಣ ಕರಡಿ

Published 2 ಜೂನ್ 2023, 16:22 IST
Last Updated 2 ಜೂನ್ 2023, 16:22 IST
ಅಕ್ಷರ ಗಾತ್ರ

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಕೆಲ ಹಾಲಿ ಸಂಸದರಿಗೆ ಟಿಕೆಟ್‌ ನೀಡುವುದಿಲ್ಲ ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿರುವುದನ್ನು ನೋಡಿದ್ದೇನೆ. ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆಯೊ ಅದಕ್ಕೆ ಬದ್ಧನಾಗಿ ನಡೆದುಕೊಳ್ಳುತ್ತೇನೆ. ಟಿಕೆಟ್‌ ವಿಚಾರವಾಗಿ ಪಕ್ಷದ ವರಿಷ್ಠರು ನನ್ನೊಂದಿಗೆ ಚರ್ಚಿಸಿಲ್ಲ’ ಎಂದರು.

‘ಪಕ್ಷವೇ ಒಪ್ಪಿಗೆ ಕೊಟ್ಟು ತೀರ್ಮಾನ ಸ್ಪರ್ಧೆ ಮಾಡಿ ಎಂದರೆ ಮಾಡುವೆ, ಇಲ್ಲವಾದರೆ ಮಾಡುವುದಿಲ್ಲ. ಈಗ ನನ್ನದು ನಿವೃತ್ತಿ ವಯಸ್ಸು’ ಎಂದರು. ಸಂಗಣ್ಣ ಸಂಸದರಾಗಿರುವುದು ಇದು ಸತತ ಎರಡನೇ ಬಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT