ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್ ತುಂಗಭದ್ರ ಜಲಾಶಯದ ಕಾಡಾ ಕಚೇರಿಯಲ್ಲಿ ಸೋಮವಾರ ನೀರಾವರಿ ಸಲಹಾ ಸಮಿತಿ ಸಭೆ ಆರಂಭವಾಯಿತು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಕಾಡಾ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ, ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ಸಮಿತಿ ಸದಸ್ಯರು ಮತ್ತು ಜಲಾಶಯದ ಅಧೀಕ್ಷಕ ಎಂಜಿನಿಯರ್ ರಾಠೋಡ ಸಭೆಗೆ ನೀರಿನ ಲಭ್ಯತೆ ಕುರಿತು ಮಾಹಿತಿ ನೀಡಿದರು.
ಜಲಾಶಯದ ವ್ಯಾಪ್ತಿಯಲ್ಲಿ ಬರುವ ಎಡ, ಬಲ, ವಿಜಯನಗರ, ರಾಯಸಂಗನಬಸವಣ್ಣ, ಕೆಳಮಟ್ಟದ, ಮೇಲ್ಮಟ್ಟದ ಕಾಲುವೆಗಳಿಗೆ ನೀರು ನಿಗದಿಪಡಿಸಿ ಹರಿಸುವ ಕುರಿತು ತೀರ್ಮಾನಿಸಲಾಗುತ್ತದೆ.
ಜಲಾಶಯದ ವ್ಯಾಪ್ತಿಯಲ್ಲಿರುವ ಬೃಹತ್ ಕಾರ್ಖಾನೆಗಳಿಗೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ನೀರು ನಿಗದಿ ಪಡಿಸಲಾಗುತ್ತದೆ.
ಜಲಾಶಯದಲ್ಲಿ ಸದ್ಯ 35 ಟಿಎಂಸಿ ನೀರು ಇದ್ದು, ಎಡ ಮತ್ತು ಬಲದಂಡೆಗೆ ಟಿಎಂಸಿ ಲೆಕ್ಕದಲ್ಲಿ, ಉಪ ಕಾಲುವೆಗಳಿಗೆ ಕ್ಯೂಸೆಕ್ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.
ಮುಂಗಾರು ಮೊದಲ ಬೆಳೆಗೆ ಯಾವುದೇ ನೀರಿನ ಯಾವುದೇ ಸಮಸ್ಯೆಯಾಗದಂತೆ ನೀರು ಬಿಡಲಾಗುವುದು ಎಂದು ಕಾಡಾ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅಂತಿಮವಾಗಿ ನೀರು ಬಿಡುವ ಪ್ರಮಾಣ ನಿಗದಿಪಡಿಸಲಾಗುತ್ತದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.