ಯಲಬುರ್ಗಾ: ತಾಲ್ಲೂಕಿನ ಮಂಡಲಮರಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು ಸಂಬಂಧಪಟ್ಟವರು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಪ್ರತಿಭಟಿಸಿ ಒತ್ತಾಯಿಸಿದ್ದಾರೆ.

ಗ್ರಾಮದ ಸಣ್ಣಸಣ್ಣ ಅಂಗಡಿಗಳಲ್ಲೂ ಯಾರ ಭಯವೂ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಗ್ರಾಮದ ಬಹುತೇಕರು ಮದ್ಯಕ್ಕೆ ದಾಸರಾಗಿದ್ದಾರೆ. ಅನೇಕ ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಬಗ್ಗೆ ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಬಕಾರಿ ಇನ್ಸ್ಪೆಕ್ಟರ್ ಶಂಕರ ದೊಡ್ಡಮನಿ ಅವರಿಗೆ ದೂರವಾಣಿ ಮೂಲಕ ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರದೇಶವನ್ನು ತಿಳಿಸಿದರೂ ಬಂದು ಪರೀಕ್ಷಿಸುತ್ತಿಲ್ಲ, ದಾಳಿಯನ್ನೂ ಮಾಡುತ್ತಿಲ್ಲ. ಅಲ್ಲದೇ ನಿಮ್ಮ ಗ್ರಾಮಕ್ಕೆ ಬರಲು ನಮಗೆ ವಾಹನವಿಲ್ಲ ಎಂದು ಬೇಜವಾಬ್ದಾರಿ ಮಾತುಗಳನ್ನಾಡುತ್ತಾರೆ. ಅಧಿಕಾರಿಗಳ ವರ್ತನೆ ಅನುಮಾನಕ್ಕೆ ಕಾರಣವಾಗಿದೆ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿರುವುದು ಅಕ್ರಮಕ್ಕೆ ಅಬಕಾರಿ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿರಬಹುದು ಎಂಬ ಸಂಶಯ ಮೂಡುತ್ತಿದೆ ಎಂದು ಗ್ರಾಮಸ್ಥರು ಹೇಳಿದರು.

ಯಲಬುರ್ಗಾದ ಅಬಕಾರಿ ಎಎಸ್ಐ ಐ.ಎಲ್.ಯಲಬುರ್ಗಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಎರಡು ದಿನಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದರು.

ಮುಖಂಡರಾದ ಯಮನೂರಪ್ಪ, ಹನಮಂತಪ್ಪ ಪೂಜಾರ, ಶರಣಗೌಡ ಪಾಟೀಲ, ಮಾರುತೇಶ ಅಸೂಟಿ ಹಾಗೂ ಗಣ್ಯರು ಹಾಜರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.