ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹1 ಕೋಟಿ ಮೌಲ್ಯದ ಅಕ್ರಮ ಮದ್ಯವಶ

ಅಬಕಾರಿ ಇಲಾಖೆಯಿಂದ ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ
Last Updated 5 ಜೂನ್ 2021, 6:01 IST
ಅಕ್ಷರ ಗಾತ್ರ

ಕೊಪ್ಪಳ: ‘ಜಿಲ್ಲೆಯಲ್ಲಿ ಏ.23 ರಿಂದ ಜೂ.3 ರವರೆಗೆ ₹1,40,86,197 ಮೌಲ್ಯದ ವಿವಿಧ ಮಾದರಿಯ ಅಬಕಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಬಕಾರಿ ಉಪ ಆಯುಕ್ತೆ ಸಿ.ಸೇಲಿನಾ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಿಂದ ಜಿಲ್ಲೆಯಾದ್ಯಂತ 45 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಅವುಗಳಲ್ಲಿ 16 ಘೋರ, 7 ಬಿಎಲ್‌ಸಿ ಹಾಗೂ 15(ಎ) ಅಡಿ 24 ಸೇರಿದಂತೆ ಒಟ್ಟು 47 ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನುಬಂಧಿಸಲಾಗಿದೆ. ದಾಳಿ ಸಂದರ್ಭ 8 ವಾಹನ, 15,069.390 ಲೀಟರ್ ಮದ್ಯ, 44.340 ಲೀಟರ್ ಬಿಯರ್, 5 ಲೀಟರ್ ಐಡಿ ಮತ್ತು 40,000 ಲೀಟರ್ ಮದ್ಯಸಾರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹1,40,86,197 ಆಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಕಾರಣ ಮೇ 17 ರಿಂದ ಜೂ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿ ಅನುಸಾರ ಗಂಗಾವತಿ ವಲಯದ 2 ಸಿಎಲ್-7 ಸನ್ನದುಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಮೇ 24 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ.

ಇಂಥ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಉಪ ಆಯುಕ್ತರಾದ ಸಿ.ಸೇಲಿನಾ ಮೊ-9449597170, ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ (ಪ್ರಭಾರ) ಯಮನೂರಸಾಬ್ ಹೊಸಮನಿ ಮೊ- 9449597175, ಅಬಕಾರಿ ನಿರೀಕ್ಷಕರು ವಿಚಕ್ಷಣ ದಳದ ಸ್ವತಂತ್ರಕುಮಾರ ಮೊ- 9591795689, ಕೊಪ್ಪಳ ವಲಯದ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮೊ- 7675114929, ಗಂಗಾವತಿ ವಲಯದ ಅಬಕಾರಿ ನಿರೀಕ್ಷಕ ಅಜಯ್ ಉಮದಿ ಮೊ- 9740394078, ಕುಷ್ಟಗಿ ವಲಯದ ಅಬಕಾರಿ ನಿರೀಕ್ಷಕ ಚಾಂದಪಾಷಾ ಮೊ- 9845947828 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT