ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಅಕ್ರಮ ಕಲ್ಲು ಗಣಿಗಾರಿಕೆ: ಲಾರಿ, ಟ್ರ್ಯಾಕ್ಟರ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಕ್ರಮಕಲ್ಲು ಸಾಗಾಟ ಮಾಡುತ್ತಿರುವ ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ಸೋಮವಾರ ಬೆಳಿಗ್ಗೆ 2.30ಕ್ಕೆ ವಶಕ್ಕೆ ಪಡೆದಿದೆ.

ಮಲ್ಲಾಪುರ ಗ್ರಾಮದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುವ ಕುರಿತು ತಹಶೀಲ್ದಾರ್ ಯು.ನಾಗರಾಜ ಅವರ
ಗಮನಕ್ಕೆ ಬಂದಿತ್ತು. ಈ ಕುರಿತು ಹಲವು ಬಾರಿ ಟ್ರ್ಯಾಕ್ಟರ್‌ಗಳ ಮೇಲೆ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಭಾಗದಲ್ಲಿ ಕೆಲವರು ಕದ್ದು ಮುಚ್ಚಿ, ದ್ರಾಕ್ಷಿ ಬೆಳೆ ತೋಟಗಳ ಬಳಕೆ ಬೇಕಾಗುವ ಕಲ್ಲು ಕಂಬಗಳನ್ನು ಆಕ್ರಮವಾಗಿ ಸಾಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಏಕಾಏಕಿ ವಾಹನಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ವಾಹನಗಳ ಚಾಲಕರು ಪರಾರಿಯಾಗಿದ್ದು, ಒಂದು ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

ತಹಶೀಲ್ದಾರ್ ಯು.ನಾಗರಾಜ, ಕಂದಾಯ ನೀರಿಕ್ಷಕ ಮಂಜುನಾಥ ಹಿರೇಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.