ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಅಕ್ರಮ ಸಾಗಣೆ: ಟ್ರ್ಯಾಕ್ಟರ್‌ ವಶ

ಗಂಗಾವತಿ: ವಿವಿಧ ಗ್ರಾಮಗಳಲ್ಲಿ ತಹಶೀಲ್ದಾರ್‌ ನೇತೃತ್ವದ ತಂಡದಿಂದ ದಾಳಿ
Last Updated 11 ಜುಲೈ 2021, 6:08 IST
ಅಕ್ಷರ ಗಾತ್ರ

ಗಂಗಾವತಿ: ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ಗಳನ್ನು ತಹಶೀಲ್ದಾರ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.

ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಲ್ಲು ಮತ್ತು ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.

ಈಚೆಗೆ ಮರಳು ಉಸ್ತುವಾರಿ ಸಮಿತಿ ಸಭೆ ನಡೆಸಿ, ಮರಳುಕಾರ್ಯಪಡೆಗೆ ಅಕ್ರಮ ತಡೆಯುವಂತೆ ಸೂಚಿಸಲಾಗಿತ್ತು.

ತಹಶೀಲ್ದಾರ್ ಯು.ನಾಗರಾಜ ಮತ್ತು ಮಂಜುನಾಥ ಸೇರಿದಂತೆ ಸಿಬ್ಬಂದಿ ನಗರದ ವಿವಿಧೆಡೆ ಸಂಚರಿಸಿ ಅಕ್ರಮವಾಗಿ ಮರಳು ಮತ್ತು ಕಲ್ಲುಗಳನ್ನು ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಸವನದುರ್ಗಾ ಗ್ರಾಮದಿಂದ ಗಂಗಾವತಿ ನಗರದ ಕಡೆ ಕಲ್ಲುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ತಡೆದು ನಿಲ್ಲಿಸಿ, ವಿಚಾರಿಸಿದಾಗ ಅಕ್ರಮವಾಗಿ ಕಲ್ಲು ಸಾಗಿಸುವ ವಿಷಯ ಬಯಲಿಗೆ ಬಂದಿದೆ. ಕೂಡಲೇ ವಿರುಪಾಪುರ ಲಲಿತ್ ಮಹಲ್ ಬಳಿ ವಾಹನ ವಶಪಡಿಸಿಕೊಳ್ಳಲಾಯಿತು.

‘ಜುಲೈ ನಗರದಲ್ಲಿ ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡು ಗಂಗಾವತಿ ನಗರ ಠಾಣೆ ಸುಪರ್ದಿಗೆ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT