ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಪಡಿತರ ಅಕ್ಕಿ ಸಂಗ್ರಹದ ಶಂಕೆ: ಮನೆ ಜಪ್ತಿ

Published 8 ಡಿಸೆಂಬರ್ 2023, 4:15 IST
Last Updated 8 ಡಿಸೆಂಬರ್ 2023, 4:15 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಮನೆಯೊಂದರಲ್ಲಿ ಆಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿ ಮೇರೆಗೆ ಗುರುವಾರ ಆಹಾರ ಇಲಾಖೆ ಅಧಿಕಾರಿಗಳು ಮನೆಯನ್ನು ಜಪ್ತಿ ಮಾಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ನಿವಾಸಿಗಳು ನೀಡಿದ ದೂರಿನನ್ವಯ ಆಹಾರ, ಕಂದಾಯ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಅಕ್ಕಿ ಸಂಗ್ರಹಿಸಿದ ಮನೆಗೆ ಭೇಟಿ ನೀಡಿದರು. ಮನೆಯ ಮಾಲೀಕರಿಗೆ ಫೋನ್‌ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಆದ್ದರಿಂದ ಆಹಾರ ಇಲಾಖೆ ಅನುಮತಿಯಿಲ್ಲದೇ ಯಾರೂ ಮನೆಯ ಬಾಗಿಲು ತೆರೆಯುವಂತಿಲ್ಲ ಎಂದು ಮನೆಯ ಬಾಗಿಲಿಗೆ ನೋಟಿಸ್‌ ಅಂಟಿಸಲಾಗಿದೆ.

ಮನೆ ಮಾಲೀಕರು 24 ಗಂಟೆಯ ಒಳಗೆ ಮನೆಗೆ ಬಂದು ಅಧಿಕಾರಿಗಳ ಸಮ್ಮುಖದಲ್ಲಿ ಮನೆ ಬಾಗಿಲು ತೆರೆಯಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಮನೆಯ ಬಾಗಿಲು ತೆರೆಯಲಾಗುತ್ತದೆ. ಸದ್ಯ ಆಕ್ರಮ ಪಡಿತರ ಸಂಗ್ರಹವಿರುವ ಕೊಠಡಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಆಹಾರ ಇಲಾಖೆ ಶಿರಸ್ತೇದಾರ್‌ ಸುಹಾನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT