ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಕಸಾಯಿಖಾನೆಗಳ ತೆರವು

Last Updated 19 ಸೆಪ್ಟೆಂಬರ್ 2021, 13:59 IST
ಅಕ್ಷರ ಗಾತ್ರ

ಗಂಗಾವತಿ: ಇಲ್ಲಿನ ಅಮರ ಭಗತ್‌ಸಿಂಗ್ ನಗರದ ಬೈಪಾಸ್ ರಸ್ತೆ ಮತ್ತು ಎಚ್.ಆರ್.ಸಿ ಕಾಲೊನಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಈಚೆಗೆ ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ನೇತೃತ್ವದ ತಂಡ ತೆರವು ಮಾಡಿತು.

ನಗರದ ಎಚ್.ಆರ್.ಎಸ್ ಕಾಲೊನಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಣ ವಧೆ ಹಾಗೂ ಕಸಾಯಿಖಾನೆ ಕುರಿತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅದರ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, 20 ಕೋಣಗಳನ್ನು ರಕ್ಷಣೆ ಮಾಡಿ, ಇಬ್ಬರನ್ನು ಬಂಧಿಸಿದ್ದರು.

ಅಲ್ಲದೆ, ಹಿಂದೂ ಜಾಗರಣ ವೇದಿಕೆಯವರು ನಗರದಲ್ಲಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು. ಪ್ರಾಣಿ ವಧೆ ಮಾಡುವವರನ್ನು ಬಂಧಿಸಬೇಕು. ಕಾನೂನು ಕ್ರಮ ಕೈಗೊಂಡು ಗೋಹತ್ಯೆ ತಡೆಯಬೇಕು ಎಂದು ಆಗ್ರಹಿಸಿ ನಗರಸಭೆಗೆ ಮುಂದೆ ಪ್ರತಿಭಟನೆ ನಡೆಸಿದ್ದರು. ತೆರವಿಗೆ ಕಾಲಾವಕಾಶ ನೀಡಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.

ಆದ್ದರಿಂದ ನಗರಸಭೆ ಪೌರಾಯುಕ್ತರ ನೇತೃತ್ವದ ತಂಡ ಜೆಸಿಬಿಗಳ ಮೂಲಕ ಅಕ್ರಮ ಕಸಾಯಿಖಾನೆಗಳನ್ನು ತೆರವು ಮಾಡಿತು.

ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ಆರೋಗ್ಯ ನಿರೀಕ್ಷಕ ನಾಗರಾಜ ಸೇರಿದಂತೆ ನಗರಸಭೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT