ಗುರುವಾರ , ಅಕ್ಟೋಬರ್ 6, 2022
26 °C

ಗಂಗಾವತಿ: ಅಕ್ರಮ ಸಾಗಣೆ, ಪಡಿತರ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡಲು ಮುಂದಾಗಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡರು.

ಚಿಕ್ಕಬೆಣಕಲ್ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಅಧಿಕಾರಿಗಳು ದಾಳಿಯನ್ನು ನಡೆಸಿದರು.

ಲಾರಿಯಲ್ಲಿದ್ದ ಲಕ್ಷಾಂತರ 82 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಗಂಗಾವತಿಯ ರಫೀಖಾನ್, ಮಹೆಬೂಬ್ ಪಾಷಾ ಮತ್ತು ವಿಶ್ವನಾಥ ಎಂಬುವವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಹಶೀಲ್ದಾರ್ ಯು.ನಾಗರಾಜ, ಆಹಾರ ನೀರಿಕ್ಷಕರಾದ ಎಚ್.ಐ.ಬಗಲಿ, ಗ್ರಾಮೀಣ ಠಾಣಾ ಪಿಎಸ್‍ಐ ದೊಡ್ಡಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು