ಗಂಗಾವತಿ: ‘ನರೇಗಾ ಯೋಜನೆಯಡಿ ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ 2025-26 ನೇ ಸಾಲಿನ ಮಾನವ ದಿನಗಳ ಸೃಜನೆ ಗುರಿ ತಲುಪಲು ಕಾರ್ಯಪ್ರವೃತ್ತರಾಗಬೇಕು’ ಎಂದು ತಾ.ಪಂ. ಇಒ ರಾಮರೆಡ್ಡಿ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ತಾ.ಪಂ ಕಾರ್ಯಾಲಯದ ಇಒ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅನುಷ್ಠಾನ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ನರೇಗಾ ಯೋಜನೆಯ ಕ್ರಿಯಾಯೋಜನೆ ಸಿದ್ಧಗೊಂಡಿದ್ದು, ಫಲಾನುಭವಿಗಳು ಸರಿಯಾಗಿ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಲು ಅಧಿಕಾರಿಗಳು, ಸಿಬ್ಬಂದಿ ಮೇಲುಸ್ತುವಾರಿ ವಹಿಸಬೇಕು. ತೋಟಗಾರಿಕೆ ಬೆಳೆ, ರೇಷ್ಮೆ, ಕೃಷಿ ಇಲಾಖೆ ವೈಯಕ್ತಿಕ ಕಾಮಗಾರಿಗಳನ್ನು ಸರಿಯಾಗಿ ಅನುಷ್ಠಾನಿಸಬೇಕು. ನರೇಗಾ ಹಾಗೂ ಇಲಾಖೆ ಸೌಲಭ್ಯಗಳನ್ನು ರೈತಾಪಿ ವರ್ಗಕ್ಕೆ ತಲುಪಿಸುವ ಕೆಲಸ ಮಾಡಬೇಕಿದೆ’ ಎಂದರು.

ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲು, ವಲಯ ಅರಣ್ಯ ಅಧಿಕಾರಿ ಬಿ.ರಾಘವೇಂದ್ರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೇವಣ್ಣ ಕಟ್ಟಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಧರೆಪ್ಪ ಹೊನ್ನಮುಡೆ, ತೋಟಗಾರಿಕೆ ಇಲಾಖೆ ಎಡಿ.ಎಚ್ ಶಿವಕುಮಾರ ಬಿ., ವಿಷಯ ನಿರ್ವಾಹಕ ಶಿವಮೂರ್ತಿ ಕಂಪಾಪೂರಮಠ ಸೇರಿ ನರೇಗಾ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.