ಕಾನೂನು ಸಲಹಾ ಕೇಂದ್ರ ಉದ್ಘಾಟನೆ

ಗಂಗಾವತಿ: ನಗರದ ತಾಲ್ಲೂಕು ನ್ಯಾಯಾಲಯದ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಆರಂಭಿಸಿರುವ ನ್ಯಾಯ ಸಂಯೋಗ ಕಚೇರಿ ಹಾಗೂ ಉಚಿತ ಕಾನೂನು ಸಲಹಾ ಕೇಂದ್ರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿ, ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ನೂತನವಾಗಿ ಆರಂಭಿಸಲಾಗಿರುವ ಈ ಕೇಂದ್ರದಲ್ಲಿ ಉಚಿತ ಕಾನೂನು ಸೇವೆ ಮತ್ತು ಕಾನೂನು ಅರಿವು-ನೆರವು, ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಕ್ಕೆ ಸಂಬಂಧಪಟ್ಟ ಮಾಹಿತಿ ನೀಡಲಾಗುವುದು ಎಂದರು.
ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಮಾತನಾಡಿ, ಕಾನೂನು ಸಲಹಾ ಕೇಂದ್ರವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ಒದಗಿಸಲಾಗುವುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಗೌರಮ್ಮ ಪಾಟೀಲ್, ವಕೀಲರಾದ ವಿರುಪಾಕ್ಷಪ್ಪ ಭಾವಿಕಟ್ಟಿ, ವಿ.ಎನ್.ಪಾಟೀಲ, ಟಿ.ಮಂಜುನಾಥ ಸೇರಿದಂತೆ ಹಲವರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.