ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಷ್ಟಗಿ: ಬಸ್‌ನಲ್ಲಿ ನೂಕುನುಗ್ಗಲು, ವಿದ್ಯಾರ್ಥಿಗಳ ಪ್ರತಿಭಟನೆ

Published 19 ಡಿಸೆಂಬರ್ 2023, 4:07 IST
Last Updated 19 ಡಿಸೆಂಬರ್ 2023, 4:07 IST
ಅಕ್ಷರ ಗಾತ್ರ

ಕುಷ್ಟಗಿ: ಸಾರಿಗೆ ಬಸ್ ಅನಾನುಕೂಲಕ್ಕೆ ಬೇ‌ಸತ್ತ ವಿದ್ಯಾರ್ಥಿಗಳು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಶಾಖಾಪುರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.

ಪಟ್ಟಣ ಸೇರಿದಂತೆ ಸುತ್ತಲಿನ ಶಾಲಾ, ಕಾಲೇಜುಗಳಿಗೆ ತೆರಳಲು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಗ್ರಾಮದಿಂದ ನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಬಸ್ಸಿನಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಮೊದಲೇ ತುಂಬಿದ್ದರಿಂದ ಶಾಖಾಪುರ ವಿದ್ಯಾರ್ಥಿಗಳಿಗೆ ಬಸ್ ಏರಲು ಸಾಧ್ಯವಾಗಲಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಗೆ ಅಸಮಾಧಾನ ಹೊರಹಾಕಿದರು.

ಕುಷ್ಟಗಿ ಘಟಕಕ್ಕೆ ಸೇರಿದ ಬಸ್ ಹಿರೇಬನ್ನಿಗೋಳ, ಯಲಬುರ್ತಿ ಮಾರ್ಗವಾಗಿ ಶಾಖಾಪುರ ಗ್ರಾಮದ ಮೂಲಕ ಪುನ: ಕುಷ್ಟಗಿಗೆ ಸಂಚರಿಸುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ ಈ ಬಸ್ ಓಡಿಸಲಾಗುತ್ತಿದೆ. ಮೊದಲ ಎರಡೂ ಗ್ರಾಮಗಳ ಬಹಳಷ್ಟು ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸುವುದರಿಂದ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇರುವ ಶಾಖಾಪುರ ವಿದ್ಯಾರ್ಥಿಗಳಿಗೆ ನಿಲ್ಲಲು ಸಾಧ್ಯವಾಗದೆ ಪರದಾಡುವಂತಾಗುತ್ತದೆ. ಈ ಸಮಸ್ಯೆಯಿಂದಾಗಿ ಶಾಲೆಗೆ ಗೈರು ಹಾಜರಾಗುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು, ವಿದ್ಯಾರ್ಥಿಗಳು ಒತ್ತಾಯಿಸಿದರು.

ಧಿಡೀರ್ ಪ್ರತಿಭಟನೆಯಿಂದಾಗಿ ಕೆಲವು ಹೊತ್ತು ಬಸ್ ಗ್ರಾಮದಲ್ಲೇ ನಿಲ್ಲುವಂತಾಗಿತ್ತು ನಂತರ ಸಾರಿಗೆ ಇಲಾಖೆ ಸಿಬ್ಬಂದಿ ಮನವೊಲಿಸಿದ ನಂತರ ಗ್ರಾಮಸ್ಥರು ಬಸ್ ಸಂಚರಿಸಲು ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT