ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್

ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್
Last Updated 7 ಆಗಸ್ಟ್ 2021, 10:40 IST
ಅಕ್ಷರ ಗಾತ್ರ

ಕೊಪ್ಪಳ: ‘ಸ್ವಾತಂತ್ರ್ಯ ದಿನಾಚರಣೆಗೆ ರಚಿಸಲಾದ ಸಂಬಂಧಿಸಿದ ಸಮಿತಿಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಈ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಬೇಕು‘ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಿವೃತ್ತ ಯೋಧರನ್ನು ಸನ್ಮಾನಿಸುವುದಕ್ಕಾಗಿ ಯೋಧರ ವಯಸ್ಸು ಮತ್ತು ಕೊಡುಗೆ ಪರಿಗಣಿಸಿ ಆಯ್ಕೆ ಮಾಡಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ಸಹ ಸನ್ಮಾನಿಸಬೇಕಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆ-ಮನೆಗಳಿಗೆ ತೆರಳಿ ಅಧಿಕಾರಿಗಳು ಅವರನ್ನು ಸನ್ಮಾನಿಸಬೇಕು ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಹಾಗೂ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದ ಸ್ತಬ್ಧಚಿತ್ರಗಳ ತಯಾರಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚನೆ ನೀಡಿದರು.

ಅಂದು ಬೆಳಿಗ್ಗೆ 8ರಂದು ಜಿಲ್ಲಾಡಳಿತ ಭವನದಲ್ಲಿ ಹಾಗೂ 9 ಗಂಟೆಗೆ ಜಿಲ್ಲಾ ಕ್ರಿಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದರು.

ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ ಮಾರುತಿ ಮಾತನಾಡಿ, ‘ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಆದರೆ ಕಾರ್ಯಕ್ರಮದ ಔಚಿತ್ಯ ಅರಿತು ಮೂರರಿಂದ ನಾಲ್ಕು ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬಹುದು‘ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್ ಮಾತನಾಡಿ, ನಗರಸಭೆ ವತಿಯಿಂದ ಕಾರ್ಯಕ್ರಮದ ದಿನದಂದು ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆಯಿಂದ ವೈದ್ಯ ಹಾಗೂ ಶುಶ್ರೂಷಕರ ಸಹಿತ ಆಂಬುಲೆನ್ಸ್ ಒದಗಿಸಬೇಕು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಉಪಾಹಾರದ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಪ್ರೊಬೆಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT