ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಗಿರಿ | ಸ್ವಾತಂತ್ರ್ಯ ದಿನಾಚರಣೆ: ಅಂತಿಮ ತಾಲೀಮು

Published : 14 ಆಗಸ್ಟ್ 2024, 13:57 IST
Last Updated : 14 ಆಗಸ್ಟ್ 2024, 13:57 IST
ಫಾಲೋ ಮಾಡಿ
Comments

ಕನಕಗಿರಿ: ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಗುರುವಾರ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಬೆಳಿಗ್ಗೆ 8.45ಕ್ಕೆ ನಡೆಯಲಿದೆ.

ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಕಲ ಸಿದ್ಧತೆ ಕೈಗೊಂಡಿದ್ದು ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಅಲಂಕಾರಗೊಳಿಸಲಾಗುತ್ತಿದೆ.

ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರ ಸಭೆ ಕರೆದು ಅದ್ದೂರಿ ಆಚರಣೆ ಕುರಿತು ಚರ್ಚಿಸಿದ್ದಾರೆ.

ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳನ್ನು ಈ ಸಮಯದಲ್ಲಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಶಾಲಾ ಆವರಣದಲ್ಲಿ ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿಲು ಪಟ್ಟಣ ಪಂಚಾಯಿತಿ ವತಿಯಿಂದ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದರು. ವಿವಿಧ ಶಾಲೆಗಳ ಮೈದಾನದಲ್ಲಿ ಬುಧವಾರ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ತಯಾರಿ ನಡೆಸುತ್ತಿರುವುದು ಕಂಡು ಬಂತು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು. ಧ್ವಜಾರೋಹಣವನ್ನು ತಹಶೀಲ್ದಾರ್ ವಿಶ್ವನಾಥ ಮುರುಡಿ ನೆರವೇರಿಸುವರು. ಸಂಸದ ಕೆ. ರಾಜಶೇಖರ ಹಿಟ್ನಾಳ ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಕನಕಗಿರಿಯ ಕೆಪಿಎಸ್ ಶಾಲೆಯ ಶಿಕ್ಷಕರು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬುಧವಾರ ಧ್ವಜದ ಕಟ್ಟೆ ಪರಿಸರದಲ್ಲಿ ರಂಗೋಲಿ ಬಿಡಿಸಿದರು
ಕನಕಗಿರಿಯ ಕೆಪಿಎಸ್ ಶಾಲೆಯ ಶಿಕ್ಷಕರು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬುಧವಾರ ಧ್ವಜದ ಕಟ್ಟೆ ಪರಿಸರದಲ್ಲಿ ರಂಗೋಲಿ ಬಿಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT