ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಗತ್ತಿನ ಅತಿದೊಡ್ಡ ಸಂವಿಧಾನ ಭಾರತದ್ದು’

ತಾಲ್ಲೂಕಿನಾದ್ಯಾಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
Published 15 ಸೆಪ್ಟೆಂಬರ್ 2023, 16:19 IST
Last Updated 15 ಸೆಪ್ಟೆಂಬರ್ 2023, 16:19 IST
ಅಕ್ಷರ ಗಾತ್ರ

ಗಂಗಾವತಿ: ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯಿತು.

ತಹಶೀಲ್ದಾರ ಮಂಜುನಾಥ ಮಾತನಾಡಿ, ‘ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಜಗತ್ತಿನ ಅತಿದೊಡ್ಡ ಸಂವಿಧಾನವಾಗಿದೆ. ಈ ಸಂವಿಧಾನ ಓದಲು ಬಹಳ ದಿನಗಳ ಸಮಯ ಅಗತ್ಯವಿರುವ ಕಾರಣ, ಇದರ ಸಂಪೂರ್ಣ ಆಶಯವನ್ನು ಒಂದೇ ಪುಟದ ಪೀಠಿಕೆಯಲ್ಲಿ ರಚಿಸಿ, ನಮಗೆಲ್ಲ ನೀಡಿದ್ದಾರೆ’ ಎಂದರು.

ನಂತರ ಸಂವಿಧಾನ ಪೀಠಿಕೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಂವಿಧಾನ ಪೀಠಿಕೆ ಓದಿ, ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಶಾಸಕ ಜಿ.ಜನಾರ್ದನರೆಡ್ಡಿ, ತಾ.ಪಂ ಇಒ ಲಕ್ಷೀದೇವಿ, ನಗರಸಭೆ ಪೌರಾಯುಕ್ತ ವಿರೂಪಾಕ್ಷಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ, ನಗರ ಠಾಣೆ ಪಿಐ ಅಡಿವೇಶ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಶ್ರೀನಿವಾಸ ನಾಯಕ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು, ಉಪನ್ಯಾಸಕರು, ಶಿಕ್ಷಕರು, ಮಕ್ಕಳು ಇದ್ದರು.

ಸಾರ್ವಜನಿಕ ಗ್ರಂಥಾಲಯ: ನಗರದ ತಾಲ್ಲೂಕು ಪಂಚಾಯಿತಿ ಮಂಥನ ಸಭಾಂಗಣ ಸಮೀಪದ ಸಾರ್ವಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ಗ್ರಂಥ ಪಾಲಕಿ ಕವಿತಾ ಕೊಟ್ರಪ್ಪ ನೇತೃತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುವ ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಓದಿದರು.

ತಾಲ್ಲೂಕಿನ ಆನೆಗೊಂದಿ ಗ್ರಾಪಂನಲ್ಲಿ ಪಿಡಿಒ, ಸಿಬ್ಬಂದಿ, ಸದಸ್ಯರು ಸಂವಿಧಾನ ಪೀಠಿಕೆ ಓದಿದರು. ಪಿಡಿಒ ಕೃಷ್ಣಪ್ಪ, ಸದಸ್ಯರಾದ ಕೆ.ತಿಮ್ಮಪ್ಪ, ವೆಂಕಟೇಶಬಾಬು, ಮಲ್ಲಿಕಾರ್ಜುನಸ್ವಾಮಿ ಇದ್ದರು.

ಗಂಗಾವತಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು
ಗಂಗಾವತಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT