ಮಂಗಳವಾರ, ಡಿಸೆಂಬರ್ 10, 2019
26 °C
ಸೇನಾ ನೇಮಕಾತಿ ರ‍್ಯಾಲಿ ತರಬೇತಿ ಶಿಬಿರದಲ್ಲಿ ಜಿಲ್ಲಾಧಿಕಾರಿ ಕರೆ

ಸೇನೆಗೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತನ್ನಿ: ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೊಪ್ಪಳ: ರಾಯಚೂರಿನಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಜಿಲ್ಲೆಯ ಯುವಕರು ದೈಹಿಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತೀಯ ಸೇನೆಗೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಯುವಕರಿಗೆ ಸಲಹೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲೆಯ ಯುವಕರಿಗಾಗಿ ಹಮ್ಮಿಕೊಳ್ಳಲಾದ ‘ಉಚಿತ ತರಬೇತಿ ಶಿಬಿರ’ ಉದ್ಘಾಟಿಸಿ ಅವರು ಮಾತನಾಡಿದರು.

ಸೈನಿಕ ಹುದ್ದೆಯು ಅತ್ಯಂತ ಶ್ರೇಷ್ಠವಾದ ಹುದ್ದೆಯಾಗಿದೆ. ಐಎಎಸ್ ಅಭ್ಯರ್ಥಿಗಳಿಗೆ ಗಡಿ ಭಾಗಗಳಲ್ಲಿ ಸೈನಿಕರೊಂದಿಗೆ ಆರ್ಮಿ ಕ್ಯಾಪ್‍ಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಭಾರತೀಯ ಸೇನೆಗೆ ಆಯ್ಕೆಗಾಗಿ ಡಿ.11 ರಿಂದ 20 ರವರೆಗೆ ರಾಯಚೂರು ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ‘ಭೂಸೇನಾ ಭರ್ತಿ ನೇಮಕಾತಿ ರ‍್ಯಾಲಿ’ ನಡೆಯಲಿದೆ ಎಂದರು. 

ಈಗಾಗಲೇ ಆನ್‌ಲೈನ್‌ ಮೂಲಕ ಹೆಸರು ನೊಂದಾಯಿಸಿಕೊಂಡಿರುವ ಜಿಲ್ಲೆಯ ಯುವ ಅಭ್ಯರ್ಥಿಗಳಿಗೆ ಈ ಕುರಿತು ಪ್ರಕಟಣೆಯ ಮೂಲಕ ಮಾಹಿತಿ ನೀಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ತಿಳಿಸಲಾಗಿತ್ತು. ಆದರೆ, ಭೂಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮಾಹಿತಿ ನೀಡುವುದರ ಜೊತೆಯಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಭೂಸೇನಾ ಅಭ್ಯರ್ಥಿಗಳಿಗೆ ಪೂರ್ವಭಾವಿ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಯ ಬಗ್ಗೆ ತಿಳಿಸಲು ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಶಿಬಿರದಲ್ಲಿ ನುರಿತ ತರಬೇತುದಾರರು ಅಭ್ಯರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಅಲ್ಲದೇ ಈ ಶಿಬಿರ ಯಾವ ರೀತಿಯಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಐಎಎಸ್ ಪ್ರೋಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಪರಿಶೀಲಿಸುವರು. ಜಿಲ್ಲೆಯ ಯುವಕರು ಈ ಶಿಬಿರದ ಸದುಪಯೋಗ ಪಡೆದುಕೊಂಡು  ರ‍್ಯಾಲಿಯಲ್ಲಿ ಯಶಸ್ವಿಯಾಗಿ, ಭಾರತೀಯ ಸೇನೆಗೆ ಆಯ್ಕೆಯಾಗಲು ಪ್ರಯತ್ನಿಸಬೇಕು ಎಂದು ಹೇಳಿದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ.ನಾಡಗೀರ ಅಧ್ಯಕ್ಷತೆ ವಹಿಸಿದ್ದರು. ಐಎಎಸ್ ಪ್ರೋಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಅಧೀಕ್ಷಕ ಬಸವರಾಜ, ಭಾರತಿಯ ಸೇವಾದಳ ಕಾರ್ಯದರ್ಶಿ ದ್ಯಾಮಣ್ಣ ಚಿಲವಾಡಗಿ, ರಾಜೇಶ ಕಟಗಿಹಳ್ಳಿ, ವೃತ್ತ ನಿರೀಕ್ಷಕ ಶಿವಾನಂದ ವಾಲೀಕರ, ಭಾರತಿಯ ಸೇವಾದಳದ ಬಸವನಗೌಡ ಇದ್ದರು.

*
ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಭೂಸೇನಾ ಅಭ್ಯರ್ಥಿಗಳಿಗೆ ಪೂರ್ವಭಾವಿ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಯ ಬಗ್ಗೆ ತಿಳಿಸಲು ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ.
–ಪಿ.ಸುನಿಲ್‌ಕುಮಾರ್‌, ಜಿಲ್ಲಾಧಿಕಾರಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು