ಕನಕಗಿರಿ: ‘ದೇಶದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ನಾಯಕ’ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ತಾಲ್ಲೂಕಾಡಳಿತ, ಪಟ್ಟಣ ಪಂಚಾಯಿತಿ ಹಾಗೂ
ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸಂವಿಧಾನದಿಂದ ದೇಶದ ಆಡಳಿತ ಯಂತ್ರ ಸುಗಮವಾಗಿ ಸಾಗಲು ಅನುಕೂಲವಾಗಿದೆ’ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿಜೆ ರಾಮಚಂದ್ರ ಮಾತನಾಡಿ, ಸಂವಿಧಾನ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕು’ ಎಂದರು.

ಮೈಸೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿಯ ಕನ್ನಡ ವಿಷಯದಲ್ಲಿ 13 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದುಕೊಂಡಿದ್ದ ತಾಲ್ಲೂಕಿನ ಕನ್ನೆರಮಡಗು ಗ್ರಾಮದ ಚಂದ್ರಶೇಖರ ಕುಷ್ಟಗಿ, ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ನಡೆದ ಬಂಕಾಪುರ ಶಾಲೆಯ ಗವಿಸಿದ್ದಪ್ಪ ಕುಷ್ಟಗಿ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಮಟಕ್ಕೆ ಆಯ್ಕೆಯಾದ ಆದರ್ಶ ವಿದ್ಯಾಲಯದ ಅಶ್ವಿನಿ ತೆಗ್ಗಿನಮನಿ ಅವರನ್ನು ಸನ್ಮಾನಿಸಲಾಯಿತು.

ಪಥ ಸಂಚಲನ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕಂಠಿರಂಗ ನಾಯಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಿ, ತಾಲ್ಲೂಕು ಪಂಚಾಯಿತಿ ಪ್ರಭಾರ ಇಒ ರಾಜಶೇಖರ, ಪಿಐ ಎಂ.ಡಿ.ಫೈಜುಲ್ಲಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಶಿರಸ್ತೇದಾರ ಅನಿತಾ ಇಂಡಿ, ಖಜಾನಾಧಿಕಾರಿ ದುರ್ಗಾಸಿಂಗ್, ಶಿಕ್ಷಣ ಸಂಯೋಜಕ ಶ್ರೀಕಾಂತ, ಪಟ್ಟಣ ಪಂಚಾಯಿತಿ ಸದಸ್ಯ ಹನುಮಂತಪ್ಪ ಬಸರಿಗಿಡದ, ಶರಣೆಗೌಡ ಪಾಟೀಲ, ಅನಿಲಕುಮಾರ ಬಿಜ್ಜಳ, ರಾಜಾಸಾಬ ನಂದಾಪುರ, ರಾಕೇಶ ಕಂಪ್ಲಿ, ಶೇಷಪ್ಪ ಪೂಜಾರ, ಶಾಂತಪ್ಪ ಬಸರಿಗಿಡದ, ಗಂಗಾಧರ ಚೌಡ್ಕಿ, ಈರಪ್ಪ ಹಾದಿಮನಿ, ಹನುಮೇಶ ಹಡಪದ, ಕನಕಪ್ಪ ಮ್ಯಾಗಡೆ ಇದ್ದರು.

ಪೊಲೀಸರಿಂದ ಧ್ವಜ ವಂದನೆ ನಡೆಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಶರಣಪ್ಪ ಚಳ್ಳಗೇರಿ ಸ್ವಾಗತಿಸಿದರು. ಶಿಕ್ಷಕ ಮಾನೇಶ ಬಡಿಗೇರ ನಿರೂಪಿಸಿದರು. ಶಿವರೆಡ್ಡಿ ಮಣ್ಣೂರು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.