ಕೊಪ್ಪಳ: ‘ಪ್ರಸಕ್ತ ಹಣಕಾಸು ವರ್ಷದಲ್ಲಿ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆ (ಟಿಪಿಎಸ್)ಗಳ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆಗೆ ಒತ್ತು ಕೊಡಬೇಕು. ಕ್ರಿಯಾಯೋಜನೆಗೆ ಅನುಮೋದನೆ ದೊರೆತ ತಕ್ಷಣ ಮತ್ತು ಅನುದಾನ ಬಿಡುಗಡೆಯಾದ ಕೂಡಲೇ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಬೇಕು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ 2023-24ನೇ ಸಾಲಿನ ಜೂನ್ ಅಂತ್ಯದವರೆಗಿನ ಪ್ರಗತಿ ಕಾಮಗಾರಿಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
‘ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011ರ ಸಮರ್ಪಕ ಅನುಷ್ಠಾನ ಮತ್ತು ಐಪಿಜಿಆರ್‌ಎಸ್ ಅರ್ಜಿಗಳ ವಿಲೇವಾರಿಗೆ ಒತ್ತು ಕೊಡಬೇಕು. ಐಪಿಜಿಆರ್‌ಎಸ್ ಹಾಗೂ ಸಕಾಲ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳಿಗೆ ತ್ವರಿತವಾಗಿ ಸೇವೆ ಲಭಿಸಬೇಕು’ ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ್, ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ ಇಲಾಖೆ, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.