12 ರಂದು ಸಲಹಾ ಸಮಿತಿ ಸಭೆ
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮುಂಗಾರು ಹಂಗಾಮಿಗೆ ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 115ನೇ ನೀರಾವರಿ ಸಲಹಾ ಸಮಿತಿ ಸಭೆ ಜು.12 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್‌ನ ಕಾಡಾ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅಧ್ಯಕ್ಷತೆ ವಹಿಸುವರು.
ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಸಂಸದರು, ಸಚಿವರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆ ನೀಡಬೇಕು ಎಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.