ಮಕ್ಕಳಿಗೆ ಕೊರೊನಾ ಸೋಂಕು: ಆದೇಶ ಪ್ರತಿ ನೀಡಿ
ಕನಕಗಿರಿ: ‘ಮಕ್ಕಳಿಗೆ ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮನೆ ಮನೆ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಿದೆ. ಈ ಕೆಲಸಕ್ಕೆ ಅಧಿಕೃತ ಆದೇಶ ನೀಡದೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ ತಿಳಿಸಿದ್ದಾರೆ.
ಮನೆ ಮನೆ ಸಮೀಕ್ಷೆ ಕುರಿತು ಅಧಿಕಾರಿಗಳು ಆನ್‌ಲೈನ್‌ನಲ್ಲಿ ಚರ್ಚೆ ಮಾಡಿ ಸಮೀಕ್ಷೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಅಧಿಕೃತ ಆದೇಶ ಹೊರಡಿಸಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮೀಕ್ಷೆ ಮಾಡಲು ಶಿಕ್ಷಕರಿಗೆ ಅಧಿಕೃತ ಆದೇಶ ಪ್ರತಿ ನೀಡಬೇಕು ಎಂದು ಅವರು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.