ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಐ ಅತಿಥಿ ಬೋಧಕರಿಗೆ ಪ್ಯಾಕೇಜ್‌ ಘೋಷಿಸಿ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆನ್‌ಲೈನ್‌ ಪ್ರತಿಭಟನೆ
Last Updated 12 ಜೂನ್ 2021, 12:15 IST
ಅಕ್ಷರ ಗಾತ್ರ

ಕೊಪ್ಪಳ: ಐಟಿಐ ಅತಿಥಿ ಬೋಧಕರಿಗೆ ಲಾಕ್‌ಡೌನ್ ಅವಧಿಯ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ, ಸೇವಾ ಭದ್ರತೆ, ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎನ್ನುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆನ್‌ಲೈನ್‌ಪ್ರತಿಭಟನೆ ನಡೆಸಲಾಯಿತು.

ರಾಜ್ಯದಾದ್ಯಂತ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) 900ಕ್ಕೂ ಹೆಚ್ಚು ಅತಿಥಿ ಬೋಧಕರು ಕೆಲಸ ನಿರ್ವಹಿಸುತ್ತಿದ್ದೇವೆ. ಕಳೆದ ವರ್ಷ ದೇಶಕ್ಕೆಕೊರೊನಾ ಬಂದು ಬಹಳಷ್ಟು ಸಮಸ್ಯೆ ಎದುರಾಗಿದೆ. ಎರಡನೇ ಅಲೆಯಿಂದ ಮತ್ತಷ್ಟುಪರದಾಡುವಂತಾಗಿದೆ. ಕಳೆದ ಮೂರು ತಿಂಗಳ ವೇತನವಿಲ್ಲದೆ ಸಂಸಾರ ನಡೆಸುವುದು ಕಷ್ಟವಾಗಿದೆ ಎಂದು ಉಪನ್ಯಾಸಕರು ಅಳಲು ತೋಡಿಕೊಂಡರು.

ಅತಿಥಿ ಬೋಧಕರಿಗೆ ಕೊರೊನಾ ಪ್ಯಾಕೇಜ್ ಘೋಷಿಸಬೇಕುಎಂದು ಆಗ್ರಹಿಸಿ ರಾಜ್ಯವ್ಯಾಪಿ ಸರ್ಕಾರಿ ಐಟಿಐ ಅತಿಥಿ ಬೋಧಕರ ಹೋರಾಟ ಸಮಿತಿ ನೇತೃತ್ವದಲ್ಲಿಆನ್‌ಲೈನ್‌ ಪ್ರತಿಭಟನೆ ಮಾಡಲಾಯಿತು.

ಸಂಪೂರ್ಣ ನಿರ್ಲಕ್ಷ್ಯಕ್ಕೆ ಗುರಿಯಾಗಿರುವ ನಾವು ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ಮೂಲಕ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಸರ್ಕಾರವನ್ನು ಒತ್ತಾಯಿಸಲಾಯಿತು.

ಶರಣು ಗಡ್ಡಿ ನೇತೃತ್ವದಲ್ಲಿಅತಿಥಿ ಬೋಧಕರಾದ ಕೊಟ್ರೇಶ್ ಕುಂಬಾರ, ಮಾರುತಿ, ರಮೇಶ, ಅತಿಥಿ ಬೋಧಕರ ಹೋರಾಟ ಸಮಿತಿಯ ಜಿಲ್ಲಾ ಮುಖಂಡರಾದ ಶರಣು ಗಡ್ಡಿ ಹಾಗೂ ಶರಣು ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT