ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕಾಂಗ್ರೆಸ್‌ ಪ್ರಚಾರದ ವೇಳೆ ಜೈ ಶ್ರೀರಾಮ್‌ ಘೋಷಣೆ

Published 6 ಏಪ್ರಿಲ್ 2024, 13:37 IST
Last Updated 6 ಏಪ್ರಿಲ್ 2024, 13:37 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಕವಲೂರು ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡಲು ಶನಿವಾರ ತೆರಳಿದ್ದ ಅವರ ಸಹೋದರರೂ ಆದ ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಎದುರು ಯುವಕರು ‘ಜೈ ಶ್ರೀರಾಮ್‌’ ಘೋಷಣೆ ಕೂಗಿದರು.

ಶಾಸಕ ಹಿಟ್ನಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಬರುವಾಗ ಯುವಕರು ಏಕಾಏಕಿ ಘೋಷಣೆ ಕೂಗಿದ್ದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಗಲಿಬಿಲಿಗೊಂಡರು.

ಇದರಿಂದ ಆಕ್ರೋಶಗೊಂಡ ಕೆಲ ಕಾಂಗ್ರೆಸ್ ಮುಖಂಡರು ಘೋಷಣೆ ಕೂಗಿದ ಯುವಕರೊಂದಿಗೆ ವಾಗ್ವಾದಕ್ಕಿಳಿದರು. ಸ್ಥಳದಲ್ಲಿಯೇ ಇದ್ದರೆ ಗಲಾಟೆ ಹೆಚ್ಚಾಗುತ್ತದೆ ಎಂದು ಭಾವಿಸಿದ ಶಾಸಕರು ಅಲ್ಲಿಂದ ಕಾಲ್ಕಿತ್ತರು. ಶಾಸಕರು ತೆರಳಿದ ಬಳಿಕ ವಾಗ್ವಾದ ಮುಂದುವರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT