ಗಂಗಾವತಿ (ಕೊಪ್ಪಳ ಜಿಲ್ಲೆ): ಇಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಸಂಸದ ಎಚ್.ಜಿ ರಾಮುಲು ಅವರ ಪುತ್ರ ಹಾಗೂ ಬಿಜೆಪಿ ಮುಖಂಡ ಎಚ್.ಆರ್ ಚೆನ್ನಕೇಶವ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ಎಚ್.ಆರ್ ಚೆನ್ನಕೇಶವ ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ವಿಫಲವಾದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಈಗ ದಿಢೀರನೇ ಜೆಡಿಎಸ್ ಸೇರಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಎಚ್.ಆರ್ ಚೆನ್ನಕೇಶವ ಅವರ ಅಣ್ಣ ಎಚ್.ಆರ್.ಶ್ರೀನಾಥ ಕೆಲ ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಈಗ ಚೆನ್ನಕೇಶವ ಜೆಡಿಎಸ್ ಸೇರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.