ಶನಿವಾರ, ಸೆಪ್ಟೆಂಬರ್ 18, 2021
24 °C
ಗಿಣಿಗೇರಾ: ಜಿ.ಪಂ ಸಿಇಒ ಫೌಜಿಯಾ ತರುನ್ನುಮ್‌ ಸೂಚನೆ

ಕೆರೆ ಅಭಿವೃದ್ಧಿಗೆ ಕೈಜೋಡಿಸಿ ಜಿ.ಪಂ ಸಿಇಒ ಫೌಜಿಯಾ ತರುನ್ನುಮ್‌ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಗಿಣಿಗೇರಾ ಗ್ರಾಮದ ಕೆರೆಯು ದೊಡ್ಡ ಕೆರೆ. ನರೇಗಾ ಯೋಜನೆಯಡಿ ಅಗತ್ಯವಾದ ಕಾಮಗಾರಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಂಡು ವಿನೂತನ ಹಾಗೂ ಮಾದರಿ ಕೆರೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಗಿಣಿಗೇರಾ ಗ್ರಾಮದಲ್ಲಿ ತೋಟಗಾರಿಕೆ, ಅರಣ್ಯ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮಾಡಿದರು.

ಗಿಣಿಗೇರಾ ಕೆರೆಯನ್ನು ಮಾದರಿ ಕೆರೆಯನ್ನಾಗಿ ನಿರ್ಮಿಸಲು ಗವಿಮಠದ ಶ್ರೀಗಳು ಪಣ ತೊಟ್ಟಿದ್ದಾರೆ. ಕೆರೆಯಲ್ಲಿ ಇಕೋ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಈಗಾಗಲೇ ಗ್ರಾಮ ಪಂಚಾಯಿತಿಯಿಂದ ಕೆರೆಗೆ ಸಂಪರ್ಕಿಸುವ ಎಲ್ಲ ನಾಲಾಗಳಲ್ಲಿ ನರೇಗಾ ಯೋಜನೆಯಡಿ ಹೂಳೆತ್ತಲಾಗಿದೆ. ಇದರಿಂದ ಕೆರೆಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹವಾಗುತ್ತದೆ. ಗ್ರಾಮ ಪಂಚಾಯಿತಿಯಿಂದ ಅಗತ್ಯವಾದ ಎಲ್ಲ ಸಹಕಾರ ಪಡೆದು ಗಿಣಿಗೇರಾ ಕೆರೆ ಮಾದರಿಯಾಗಿ ಮಾಡಲಾಗುವುದು. ಈ ಕೆರೆಗೆ ಅಗತ್ಯವಾದ ಎಲ್ಲವನ್ನು ಸಿದ್ಧಪಡಿಸಿಕೊಂಡು ವಿಳಂಬಕ್ಕೆ ಅವಕಾಶ ನೀಡದೆ ಕಾಮಗಾರಿ ಮುಕ್ತಾಯಗೊಳಿಸಬೇಕು ಎಂದರು. ಉಪಕಾರ್ಯದರ್ಶಿ ಶರಣಬಸವರಾಜ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಕೃಷ್ಣ ಉಕ್ಕುಂದ, ತಾಲ್ಲೂಕು ಪಂಚಾಯಿತಿ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸ್ ಬೋಸ್ಲೆ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ, ಸಾಮಾಜಿಕ ವಲಯ ಉಪಅರಣ್ಯಾಧಿಕಾರಿ ಅಬ್ದುಲ್ಲಾ, ಕಿರಿಯ ಎಂಜಿನಿಯರ್ ನರೇಶ್, ಗಿಣಿಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಡೊಳ್ಳಿನ, ಸದಸ್ಯ ಕರಿಯಪ್ಪ ಮೇಟಿ, ಕೆರೆ ಸಮಿತಿ ಅಧ್ಯಕ್ಷ ಸುಬ್ಬಣ್ಣಾಚಾರ್ಯ ವಿದ್ಯಾನಗರ, ಪಿಡಿಒ ಮಂಜುಳಾ ಹೂಗಾರ್, ತಾಂತ್ರಿಕ ಸಂಯೋಜಕ ಬಸವರಾಜ, ತಾಂತ್ರಿಕ ಸಹಾಯಕ ಕೃಷ್ಣ ಸಜ್ಜನ ಹಾಗೂ ಸಿಬ್ಬಂದಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು