ಭಾನುವಾರ, ಡಿಸೆಂಬರ್ 4, 2022
21 °C
ನವಲಿ: ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ

ಬಿಜೆಪಿ ಆಡಳಿತ ಜನ ವಿರೋಧಿ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಗಳು ಜನ ವಿರೋಧಿ ಸರ್ಕಾರಗಳಾಗಿವೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ದೂರಿದರು.

ಇಲ್ಲಿಗೆ ಸಮೀಪದ ನವಲಿ ಗ್ರಾಮದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ. ರೈಸ್ ಟೆಕಾಲ್ನಜಿ ಪಾರ್ಕ್ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಕ್ಷೇತ್ರದಲ್ಲಿ ಎರಡು ತಾಲ್ಲೂಕು ಕೇಂದ್ರಗಳನ್ನು ರಚಿಸಲಾಗಿದೆ. ಪುರಸಭೆ, ಪಟ್ಟಣ ಪಂಚಾಯಿತಿಗಳಾಗಿವೆ ಎಂದರು.

ಭಾಗದ ರೈತರಿಗೆ ಅನುಕೂಲ ಮಾಡಿಕೊಡಲು ತುಂಗಾಭದ್ರ ನದಿಯ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಪ್ಪಿಸಲು ಸಮಾನಾಂತರ ಜಲಾಶಯಗಳನ್ನು ನಿರ್ಮಾಣ ಮಾಡಲು ತಮ್ಮ ಅವಧಿಯಲ್ಲಿ ಸಮೀಕ್ಷೆ ಮಾಡಲಾಗಿತ್ತು. ಆದರೆ, ಈ ಸರ್ಕಾರದವರು ಒಂದೇ ಜಲಾಶಯ ನಿರ್ಮಾಣ ಮಾಡಲು ಒತ್ತು ನೀಡಿರುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಸೇರ್ಪಡೆಗೊಂಡ ವಿಶೇಷ ಮಾರುಕಟ್ಟೆ ಸಮಿತಿ ಮಾಜಿ ಉಪಾಧ್ಯಕ್ಷ ವಿರುಪಣ್ಣ ಕಲ್ಲೂರು ಅವರು ಶಾಸಕ ಬಸವರಾಜ ದಢೇಸೂಗೂರು ಅವರ ಆಡಳಿತ ವೈಖರಿ ವಿರುದ್ದ ಹರಿಹಾಯ್ದರು.

ಕೆಪಿಸಿಸಿ ಯುವ ಘಟಕದ ಮಾಜಿ ರಾಜ್ಯ ಅಧ್ಯಕ್ಷ ಬಸನಗೌಡ ಬಾದರ್ಲಿ, ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರಸ್ವಾಮಿ ಮಾತನಾಡಿದರು.

ಗ್ರಾಪಂ ಮಾಜಿ ಉಪಾಧ್ಯಕ್ಷರಾದ ಬಸವರಾಜ ಸಂಕನಾಳ, ಮಲ್ಲಿಕಾರ್ಜುನ ರಾಠೋಡ್, ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಕುದುರಿಕುಣಿತ, ಪ್ರಮುಖರಾದ ಪ್ರಕಾಶ ಖ್ಯಾಡೆದ ಚೇತನಕುಮಾರ ಶ್ರೇಷ್ಠಿ, ವೆಂಕಟೇಶ ನಾಯಕ, ಶಂಕರ ಭಜಂತ್ರಿ, ವೀರೇಶ ಆದಾಫುರ, ಶಂಕರ ನಾಯಕ್ ಸೇರಿದಂತೆ ಗ್ರಾಪಂ ವ್ಯಾಪ್ತಿಯ ನೂರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕಾರಟಗಿ ಬ್ಲಾಕ್ ಅಧ್ಯಕ್ಷ ಶರಣೆಗೌಡ ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪ್ರಮುಖರಾದ ಶಿವರೆಡ್ಡಿ ನಾಯಕ, ರೆಡ್ಡಿಶ್ರೀನಿವಾಸ, ಅಮರೇಶ ಗೋನಾಳ, ಗಂಗಾಧರಗೌಡ, ತಾಯಪ್ಪ ಕೋಟ್ಯಾಳ, ಗಂಗಾಧರಗೌಡ, ಶಿವರೆಡ್ಡಿ ಖ್ಯಾಡೆದ, ಸಿದ್ದನಗೌಡ ಮಾಲಿ ಪಾಟೀಲ, ಪ್ಯಾಟೆಪ್ಪ ನಾಯಕ ನಿಂಗಪ್ಪ ದೇವರಗುಡಿ, ಜಡಿಯಪ್ಪ ಭೋವಿ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು