ಗುರುವಾರ , ಮಾರ್ಚ್ 23, 2023
23 °C
ಪತ್ರಿಕಾ ಭವನ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಶಂಕುಸ್ಥಾಪನೆ

ಪತ್ರಕರ್ತರ ಒಡಕು- ರಾಜಕಾರಣಿಗಳಿಗೆ ಅನುಕೂಲ: ಸಚಿವ ಆನಂದ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಸಮಾಜಮುಖಿ ಕೆಲಸ ಮಾಡಬೇಕಾದ ಪತ್ರಕರ್ತರ ನಡುವೆ ಒಡಕು ಮೂಡಿದರೆ ಅದರ ಲಾಭ ರಾಜಕಾರಣಿಗಳಿಗೆ ಆಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ‘ಎಲ್ಲರೂ ಸಮಾಜ ನೆನಪಿನಲ್ಲಿಟ್ಟುಕೊಳ್ಳುವ ರೀತಿಯಲ್ಲಿ ಕೆಲಸ ಮಾಡಬೇಕು. ವ್ಯವಸ್ಥೆಯನ್ನು ಹಾಳುಮಾಡುವ ಹಾಗೂ ಒಂದುಗೂಡಿಸುವ ಕೆಲಸವನ್ನು ರಾಜಕಾರಣಿಗಳು ಮಾಡುತ್ತಾರೆ. ಅಧಿಕಾರ ಇಂದು ಇರುತ್ತದೆ, ನಾಳೆಗೆ ಹೋಗುತ್ತದೆ. ಆದರೆ, ಮಾಧ್ಯಮದವರ ನಡುವಿನ ಬಿಕ್ಕಟ್ಟಿನಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಿಲ್ಲ’ ಎಂದು ಬೇಸರದಿಂದಲೇ ಹೇಳಿದರು.

‘ಭವನ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ನೀಡಿದ ಮಾತ್ರಕ್ಕೆ ಪತ್ರಕರ್ತರಿಂದ ಏನನ್ನೂ ನಿರೀಕ್ಷೆ ಮಾಡುವುದಿಲ್ಲ. ನೀವೆಲ್ಲರೂ ಒಗ್ಗಟ್ಟಿನಿಂದ ಇದ್ದು ಹದ್ದಿನ ಕಣ್ಣಿಟ್ಟು ಕೆಲಸ ಮಾಡಿದಾಗ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಎಚ್ಚರಿಕೆಯಿಂದ ತನ್ನ ಜವಾಬ್ದಾರಿ ನಿಭಾಯಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ,  ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್.ಪಾಟೀಲ, ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ಎಂ. ತರುನ್ನಮ್‌, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್‌, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಗುಡ್ಲಾನೂರು, ಭಾರತೀಯ ಪತ್ರಕರ್ತರ ಒಕ್ಕೂಟದ ನವದೆಹಲಿ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು