ಕುಕನೂರು: ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ಅವರು ಪಟ್ಟಣದ 6ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.
ಕೇಂದ್ರದಲ್ಲಿ ಸಮಸ್ಯೆ ಕಂಡುಬಂದ ಕಾರಣ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹರಿಸಲು ಸೂಚಿಸಿದರು.
ಅಂಗನವಾಡಿ ಕೇಂದ್ರದ ಮೇಲ್ಚಾವಣಿ ತಗಡಿನಿಂದ ಕೂಡಿದೆ. ಮಕ್ಕಳು ಗಾಳಿ ಇಲ್ಲದೆ ಪರದಾಡುವಂತಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿಲ್ಲ. ಪಾಳು ಬಿದ್ದ ಕಟ್ಟಡದಲ್ಲಿ ಕೇಂದ್ರ ಇದೆ ಎಂದು ತಿಳಿಸಿದರು.