ಶುಕ್ರವಾರ, ಏಪ್ರಿಲ್ 3, 2020
19 °C

ಮಹಿಳೆಯ ಮೇಲೆ ಹಲ್ಲೆ: ಆರೋಪಿಗೆ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗೆದಗೇರಿ ತಾಂಡಾದಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಯಲಬುರ್ಗಾ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ.

ತಾಂಡಾದಲ್ಲಿ ಸಂಬಂಧಿಕರ ಮನೆಗೆ ಹೊರಟ ಮಹಿಳೆಯನ್ನು ತಡೆದು, ಅವರ ಮೈ ಕೈ ಮುಟ್ಟಿ, ಅವಾಚ್ಯ ಶಬ್ಧಗಳಿಂದ ಬೈದು ಅವರಿಗೆ ಹಲ್ಲೇ ಮಾಡಿದ್ದರು ಎನ್ನಲಾದ ನೀಲಪ್ಪ ಭರಮಪ್ಪ ಕಕ್ಕಿಹಳ್ಳಿ, ತಿರುಪತಿ ತಂದೆ ಭರಮಪ್ಪ ಕಕ್ಕಿಹಳ್ಳಿ ಇವರನ್ನು ದೋಷಿಗಳೆಂದು ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಶ್ರೀಶೈಲ ಬಾಗಡಿರವರು ಈಚೆಗೆ (ಫೆ.28) ತೀರ್ಪು ನೀಡಿದ್ದಾರೆ.

ಆರೋಪಿಗಳಿಗೆ 2 ವರ್ಷ 7 ತಿಂಗಳ ಶಿಕ್ಷೆ ಹಾಗೂ ₹ 4,900 ದಂಡ ವಿಧಿಸಿದ್ದು, ದಂಡದ ಮೊತ್ತದಲ್ಲಿ ₹ 1,500 ನೊಂದ ಮಹಿಳೆಗೆ ಪರಿಹಾರ ನೀಡಲು ಆದೇಶ ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಯಲಬುರ್ಗಾ ಠಾಣೆಯ ಎಎಸ್‌ಐ ಅವರು ತನಿಖೆ ಮಾಡಿ, ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಅಬೀದುಲ್ಲಾ ಇಮಾಮಸಾಬ್‌ ಹಾದಿಮನಿ ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)